ದೊಡ್ಡಬಳ್ಳಾಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ, 2020-21ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ನೀಟ್ ನಲ್ಲಿ ಆಯ್ಕೆಯಾಗುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅಪೇಕ್ಷಿಸುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದ ವೆಬ್‌ಸೈಟ್ kmdc.kar.nic.in/Arivu2 ನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು 2020ರ ಸೆಪ್ಟೆಂಬರ್ 18 ಕೊನೆಯ ದಿನವಾಗಿದೆ ಹಾಗೂ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಹಾರ್ಡ್ ಕಾಪಿಯೊಂದಿಗೆ ಕ್ರೊಡೀಕೃತ ಮಾಹಿತಿಗಳನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಲು 2020ರ ಸೆಪ್ಟೆಂಬರ್ 20 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

