ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 10 ರಂದು) 51 ಪುರುಷರು ಹಾಗೂ 26 ಮಹಿಳೆಯರು ಸೇರಿದಂತೆ 77 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ವರದಿ ತಿಳಿಸಿದೆ.

ವರದಿಯನ್ವಯ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 10 ಪುರುಷರು ಮತ್ತು 3 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 7 ಪುರುಷರು ಮತ್ತು 2 ಮಹಿಳೆಯರು ಹಾಗೂ ದೇವನಹಳ್ಳಿ ತಾಲ್ಲೂಕಿನಲ್ಲಿ 15 ಪುರುಷರು ಮತ್ತು 3 ಮಹಿಳೆಯರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನ ವರದಿ ಕುರಿತು. ಜಿಲ್ಲಾ ಆರೋಗ್ಯ ಇಲಾಖೆ ನೀಡಿರುವ ವರದಿಯಲ್ಲಿ ಗೊಂದಲ ಮುಂದುವರೆದಿರುವ ಕಾರಣ.ಜಿಲ್ಲಾ ಆರೋಗ್ಯ ಇಲಾಖೆಯ ವರದಿಯನ್ನು ಹರಿತಲೇಖನಿ ಪ್ರಕಟಿಸುತ್ತಿಲ್ಲ.
