ದೊಡ್ಡಬಳ್ಳಾಪುರ: ಯದ್ಲಳ್ಳಿ ಪಾಪಣ್ಣ ಭಾಗವತ ಯಕ್ಷಗಾನ ಮಂಡಳಿಯ ಹಿರಿಯ ಕಲಾವಿದ ಕೆ.ಸಿ.ನಾರಾಯಣ್ ಅವರು ಕರ್ನಾಟಕ ಸರ್ಕಾರದ ಯಕ್ಷಗಾನ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲ್ಲೂಕು ಕಲಾವಿದರ ಸಂಘದಿಂದ ಸನ್ಮಾನಿಸಲಾಯಿತು.

ಈ ವೇಳೆ ತಾಲೂಕು ಕಲಾವಿದರ ಸಂಘದ ಅಧ್ಯಕ್ಷ ರಾಮಾಂಜಿನಪ್ಪ, ಕಾರ್ಯದರ್ಶಿ ಮಲ್ಲಾತಹಳ್ಳಿ ಚಂದ್ರಶೇಖರ್, ಮುಖಂಡರಾದ ವೆಂಕಟರಾಜು, ಗಾಳಿಪಟ ಪ್ರಕಾಶ್ ಮತ್ತಿತರಿದ್ದರು.

