ದೊಡ್ಡಬಳ್ಳಾಪುರ: 54ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಗೆ ಚಾಲನೆ‌ ನೀಡಿದ ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ

ದೊಡ್ಡಬಳ್ಳಾಪುರ: ಅನಕ್ಷರಸ್ಥರಿಗೆ ಅಕ್ಷರ ಕಲಿಸುವುದು ಅವರ ಬಾಳಿಗೆ ಬೆಳಕು ನೀಡಿದಂತೆ. ಅಜ್ಞಾನ ಎಂಬ ಅಂಧಕಾರವನ್ನು ಅಳಿಸಿ ಅವರ ಬಾಳಿಗೆ ಶಿಕ್ಷಣವೆಂಬ ಬೆಳಕು ನೀಡಲು ಎಲ್ಲರೂ ಪ್ರಯತ್ನಿಸಬೇಕು ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ರತ್ನಮ್ಮಜಯರಾಂ ಮನವಿ ಮಾಡಿದರು.

ತಾಲೂಕಿನ ದರ್ಗಾಜೋಗಹಳ್ಳಿಯಲ್ಲಿ ಆಯೋಜಿಸಿದ್ದ 54ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ ಎಲ್ಲರಿಗೂ ಅತೀ ಅವಶ್ಯಕವಾಗಿ ಬೇಕಾಗಿರುವ ಸಾಧನವಾಗಿದ್ದು ಶಿಕ್ಷಣದಿಂದ ವಂಚಿತರಾದ ಲಕ್ಷಾಂತರ ಜನರಿಗಾಗಿ ಸರ್ಕಾರ ಸಾಕ್ಷರತಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅವುಗಳ ಪ್ರಯೋಜನ ಪಡೆದುಕೊಂಡು ಸುಶಿಕ್ಷಿತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು.ಶಿಕ್ಷಣ ಮಾನವನನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ. ಹಾಗೂ ಸುಸಂಸ್ಕೃತ ನಾಗರೀಕನನ್ನಾಗಿ  ರೂಪಿಸುತ್ತದೆ.ಕೇವಲ ಕೆಲಸಕ್ಕಾಗಿ ಓದದೇ ಜ್ಞಾನಾರ್ಜನೆಗಾಗಿ ಓದಿದಾಗ ಪ್ರಪಂಚದ ಅರಿವು ಉಂಟಾಗಿ ಎಲ್ಲಾ ದೇಶಗಳ ಆಚಾರವಿಚಾರ ರೂಢಿಸಂಪ್ರದಾಯಗಳ ಅರಿವಾಗಿ ಸಮಾಜದಲ್ಲಿ ಹೇಗೆ ಬಾಳಬೇಕೆಂಬುದನ್ನು ಕಲಿಸಿಕೊಡುತ್ತದೆ. ಹಾಗಾಗಿ ಶಿಕ್ಷಣದಿಂದ ಯಾರೂ ಕೂಡ ವಂಚಿತರಾಗಬಾರದು ಎಂದು ತಿಳಿಸಿದರು.

ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಹನುಮಂತಪ್ಪ ಮಾತನಾಡಿ, 2011 ರಲ್ಲಿ ಸಾಕ್ಷರತೆ ಯ ಮಟ್ಟ ಗ್ರಾಮಾಂತರ  ಜಿಲ್ಲೆಯಲ್ಲಿ 77.93 ಇದೆ. 2018-19 ನೇ ಸಾಲಿನಲ್ಲಿ 5966 ಜನ ಪರೀಕ್ಷೆ ಯಲ್ಲಿ ಉತ್ತೀರ್ಣರಾಗಿದಾರೆ, 2019-20 ನೇ ಸಾಲಿನಲ್ಲಿ ಗ್ರಾಮೀಣ ಭಾಗದಲ್ಲಿ ಸ್ತೀಶಕ್ತಿ,ಸ್ವಸಹಾಯ ಸಂಘ, ನಗರದ ಕೋಳಚೆ ಪ್ರದೇಶದ ಒಟ್ಟು 5906 ಜನರನ್ನು ಸಾಕ್ಷರತಾ ಕಲಿಕೆಗೆ ಒಳಪಡಿಸುವ ಗುರಿ ಇತ್ತು ಮಹಾಮಾರಿ ಕರೊನಾ ಕಾಯಿಲೆ ಇಂದ ಕಲಿಕೆ ಸ್ಥಗಿತಗೊಂಡಿತು ಎಂದು ತಿಳಿಸಿದರು.

ಬಿಇಒ ಬೈಯಪ್ಪರೆಡ್ಡಿ ಮಾತನಾಡಿ, ರಾಷ್ಟ್ರ, ರಾಜ್ಯಮಟ್ಟದಿಂದ ಹಿಡಿದು ಗ್ರಾಮ ಪಂಚಾಯಿತಿ ಮಟ್ಟದವರೆಗೆ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಪರಿವರ್ತಿಸುವ ಕಾರ್ಯಕ್ರಮ. ಗ್ರಾಮೀಣ ಮಟ್ಟದಲ್ಲಿನ ಅಲ್ಪಸಂಖ್ಯಾತರ, ಪರಿಶಿಷ್ಟ ವರ್ಗಗಳ ಮಹಿಳೆಯರ ಮತ್ತು ಪುರುಷರ ಶೈಕ್ಷ ಣಿಕ ಮಟ್ಟ ಸುಧಾರಣೆಗಾಗಿ ಸಾಕ್ಷರತಾ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರದಲ್ಲಿ ತಾಲ್ಲೂಕು ಸಂಯೋಜಕ ರವೀಂದ್ರ, ದೊಡ್ಡನಂಜಪ್ಪ ಗ್ರಾಪಂ ಮಾಜಿ ಅದ್ಯಕ್ಷ ಪ್ರಸನ್ನಕುಮಾರ್ ಮತ್ತಿತರಿದ್ದರು.

ರಾಜಕೀಯ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25:5.25:4.5 ಮೀಸಲಾತಿ (Internal reservation) ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ

[ccc_my_favorite_select_button post_id="121345"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]