ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಶನಿವಾರದ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 25 ಜನರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, 39 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದರೆ, 93ವರ್ಷದ ಸೋಂಕಿತ ವ್ಯಕ್ತಿ ತೀವ್ರ ಉಸಿರಾಟದ ತೊಂದರೆ ಸಾವನಪ್ಪಿದ್ದಾರೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ,ಶನಿವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 19 ಪುರುಷರು ಹಾಗೂ 6 ಮಹಿಳೆಯರು ಸೇರಿ 25 ಜನರಿಗೆ ಸೋಂಕು ದೃಡಪಟ್ಟಿದ್ದು, ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ತೆಲುಗು ಶಾಲೆ ರಸ್ತೆಯ 93 ವರ್ಷದ ಪುರುಷ ಉಸಿರಾಟದ ತೊಂದರೆಯಿಂದ ಸಾವನಪ್ಪಿದ್ದಾರೆ.

ಹರಿತಲೇಖನಿಗೆ ದೊರೆತಿರುವ ಮಾಹಿತಿಯಂತೆ. ಶಾಂತಿನಗರ, ದೇವರಾಜನಗರ, ಕರೇನಹಳ್ಳಿ ಗಡ್ಡಂಬಚ್ಚಹಳ್ಳಿಯಲ್ಲಿ 2, ಹಾಲೇನಹಳ್ಳಿ, ಬಾಶೆಟ್ಟಿಹಳ್ಳಿ, ವಿನಾಯಕನಗರ ಕುಚ್ಚಪ್ಪನಪೇಟೆ, ಕನಸವಾಡಿ, ಕಚೇರಿಪಾಳ್ಯ, ಹುಲಿಕುಂಟೆ, ತೇರಿನಬೀದಿ, ಭುವನೇಶ್ವರಿ ನಗರ, ಗಾಣಿಗರಪೇಟೆ, ಗಂಗಾಧರಪುರ ಲೇಔಟ್, ತೆಲುಗು ಶಾಲೆ ಸಮೀಪ, ವನ್ನಿಗರಪೇಟೆ, , ನೇಯ್ಗೆ ಬೀದಿ, ಖಾಸ್ ಬಾಗ್, ಮುತ್ಸಂದ್ರ, ಕೊಂಗಾಡಿಯಪ್ಪ ಕಾಲೇಜು ಮುಖ್ಯ ರಸ್ತೆಯಲ್ಲಿ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.
ಪ್ರಸ್ತುತ ತಾಲೂಕಿನಲ್ಲಿ 1580 ಮಂದಿಗೆ ಸೋಂಕು ತಗುಲಿದ್ದು, 1062ಮಂದಿ ಗುಣಮುಖರಾಗಿದ್ದರೆ 52 ಮಂದಿ ಸಾವನಪ್ಪಿದ್ದಾರೆ. ಸೋಂಕಿಗೆ ಒಳಗಾದ 56 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 410 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
