ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 12 ರಂದು) 133 ಪುರುಷರು ಹಾಗೂ 78 ಮಹಿಳೆಯರು ಸೇರಿದಂತೆ 211 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ವರದಿ ತಿಳಿಸಿದೆ.

ವರದಿಯನ್ವಯ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 10 ಪುರುಷರು ಮತ್ತು 4 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 42 ಪುರುಷರು ಮತ್ತು 40 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 20 ಪುರುಷರು ಮತ್ತು 10 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 4 ಪುರುಷರು ಹಾಗೂ 1 ಮಹಿಳೆಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಉಳಿದಂತೆ ಹರಿತಲೇಖನಿ ದೊಡ್ಡಬಳ್ಳಾಪುರ ತಾಲೂಕು ಆಡಳಿತ ನೀಡಿರುವ ವರದಿ ಈಗಾಗಲೇ ಪ್ರಕಟಿಸಿದ್ದು. ಜಿಲ್ಲಾ ಆರೋಗ್ಯ ಇಲಾಖೆ ದೊಡ್ಡಬಳ್ಳಾಪುರ ತಾಲ್ಲೂಕಿನ ಅಂಕಿಅಂಶಗಳಲ್ಲಿ ಗೊಂದಲ ಮುಂದುವರೆದಿರುವ ಕಾರಣ ಹರಿತಲೇಖನಿ ಪ್ರಕಟಿಸುತ್ತಿಲ್ಲ.
