ದೊಡ್ಡಬಳ್ಳಾಪುರ: ನಂದಿ ಬೆಟ್ಟಕ್ಕೆ ವೀಕೆಂಡ್ ಮಸ್ತಿಗಾಗಿ ಪ್ರವಾಸಿಗರು ಮುಗಿಬಿದಿದ್ದು,ಬೆಟ್ಟಕ್ಕೆ ಸಾಗುವ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಕರೊನಾ ಸೋಂಕನ್ನು ತಡೆಗಟ್ಟಲು ಘೋಷಿಸಲಾಗಿದ್ದ ನಂದಿ ಬೆಟ್ಟದ ಪ್ರವೇಶ ನಿಷೇಧವನ್ನು, ಜಿಲ್ಲಾಧಿಕಾರಿ ಸೆಪ್ಟೆಂಬರ್ 7ರಿಂದ ತೆರವುಗೊಳಿಸಿದ ನಂತರದ ವೀಕೆಂಡ್ ಇದಾಗಿದೆ.

ಇಂದು ಮುಂಜಾನೆಯಿಂದಲೇ ಬೆಟ್ಟದ ತಪ್ಪಲಿನಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ವಾಹನಗಳು ಸರದಿ ಸಾಲಿನಲ್ಲಿ ನಿಂತಿದ್ದವು.ಏಕಾಏಕಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬೆಟ್ಟಕ್ಕೆ ತೆರಳುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ ಎನ್ನಲಾಗಿದೆ.
ಕಳೆದ ಮೂರ್ನಾಲ್ಕು ತಿಂಗಳಿಂದ ಕರೋನಾ ಹಿನ್ನೆಲೆ ನಂದಿಬೆಟ್ಟಕ್ಕೆ ಪ್ರವೇಶ ನಿಷೇಧವಿದ್ದ ಕಾರಣ ಪ್ರವಾಸಿಗರ ಸಂಖ್ಯೆ ಕಡಿಮೆ ಇತ್ತು.
