ದೊಡ್ಡಬಳ್ಳಾಪುರ: ತಾಲೂಕಿನ ಕನಸವಾಡಿಯ ಚಿಕ್ಕಮಧುರೆ ಕ್ಷೇತ್ರದ ಶ್ರೀ ಶನಿಮಹಾತ್ಮ ಸ್ವಾಮಿ ದೇವಸ್ಥಾನದ ಪ್ರಾರ್ಥನಾ ಮಂದಿರದಲ್ಲಿ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಾಲಯದ ಧರ್ಮದರ್ಶಿ ಪ್ರಕಾಶ್ ತಿಳಿಸಿದ್ದಾರೆ.

ಈ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು, ಭಕ್ತರ ಒತ್ತಾಯದ ಮೇರೆಗೆ, ಪ್ರತಿ ತಿಂಗಳ ಹುಣ್ಣಿಮೆಯಂದು ಪಂಡಿತ್ಯ ವಿಶಾರದ ಪುರೋಹಿತರ ಮುಖೇನ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜಾ ಕಾರ್ಯಕ್ರಮವನ್ನು ನಡೆಸಲಾಗುತ್ತಿದ್ದು,ಹೆಚ್ಚಿನ ಮಾಹಿತಿಗಾಗಿ 9113294824 ಸಂಖ್ಯೆಗೆ ಕರೆ ಮಾಡಲು ತಿಳಿಸಿದ್ದಾರೆ.

