ದೊಡ್ಡಬಳ್ಳಾಪುರ: ವಿದ್ಯಾಗಮ ವಿಶಾಲ ಸ್ಥಳದಲ್ಲಿ ರೂಪುಗೊಳ್ಳಲಿ / ವಿದ್ಯಾಗಮ ಸಾಧಕ ಬಾಧಕಗಳು

ದೊಡ್ಡಬಳ್ಳಾಪುರ: ಮಕ್ಕಳ ಕಲಿಕೆ, ಬೋಧನೆಗೆ ತೊಂದರೆಯಾಗಬಾರದು, ಶೈಕ್ಷಣಿಕ ವಿಚಾರಗಳಿಂದ ಅವರು ದೂರ ಉಳಿಯಬಾರದು ಎಂಬ ಉದ್ದೇಶದಿಂದ ಶಿಕ್ಷಣ ಇಲಾಖೆ ರೂಪಿಸಿರುವ ವಿದ್ಯಾಗಮ ಯೋಜನೆ ನಗರ ಪ್ರದೇಶದಲ್ಲಿ ಕೆಲವು ತೊಡರುಗಳನ್ನು ಎದುರಿಸುತ್ತಿದ್ದು, ಯೋಜನೆಯ ಸಾಧಕ ಬಾಧಕಗಳ ಬಗ್ಗೆ ಇಲಾಖೆ ಗಮನ ಹರಿಸಿ, ಶಾಲಾ ಶಿಕ್ಷಕರಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡಬೇಕೆಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ವಿದ್ಯಾಗಮ ರೂಪು ರೇಷೆ:

ಕೋವಿಡ್-19 ಕಾರಣದಿಂದಾಗಿ ಶಾಲೆ ಆರಂಭವಾಗದಿದ್ದರೂ ಮಕ್ಕಳ ಕಲಿಕೆ, ಬೋಧನೆಗೆ ತೊಂದರೆಯಾಗಬಾರದು, ಶೈಕ್ಷಣಿಕ ವಿಚಾರಗಳಿಂದ ಅವರು ದೂರ ಉಳಿಯಬಾರದು. ಮಕ್ಕಳ ಸಾಮಾರ್ಥ್ಯಕ್ಕೆ ಅನುಗುಣವಾಗಿ ಸಾಮಾಜಿಕ ಅಂತರ ಕಾಪಾಡಿಕೊಂಡು ಮಕ್ಕಳ ಮನೆ ಅಸುಪಾಸಿನಲ್ಲಿನ ಅರಳಿ ಕಟ್ಟೆ, ಊರಿನ ಕಟ್ಟೆ, ಹಾಲ್. ದೇವಾಲಯದ ಆವರಣ ಹೀಗೆ ಎಲ್ಲಿ ಸ್ಥಳಾವಕಾಶ ಇದೆಯೋ ಅಲ್ಲಿ ಮಕ್ಕಳನ್ನು ಸೇರಿಸಿ, ಕೋವಿಡ್-19 ಮುಂಜಾಗ್ರತಾ ನಿಯಮಗಳನ್ನು ಪಾಲಿಸಿಕೊಂಡು ಪಾಠಕ್ಕೆ ಸಂಬಂದಿಸಿದ ವಿಚಾರಗಳನ್ನು ತಿಳಿಸಲಾಗುತ್ತಿದೆ. 

ನಗರ ಪ್ರದೇಶದಲ್ಲಿ ಸಮಸ್ಯೆ:

ಗ್ರಾಮೀಣ ಪ್ರದೇಶಗಳಲ್ಲಿ ದೇವಾಲಯದ ಆವರಣಗಳು, ಅಶ್ವತ್ಥಕಟ್ಟೆ ಮೊದಲಾದ ಸಾರ್ವಜನಿಕರ ಪ್ರದೇಶಗಳಲ್ಲಿ ಸಾಕಷ್ಟು ಸ್ಥಳಾವಕಾಶವಿರುತ್ತದೆ. ಆದರೆ ನಗರ ಪ್ರದೇಶಗಳಲ್ಲಿ ಈ ರೀತಿಯ ಸ್ಥಳಾವಕಾಶಗಳು ಕಡಿಮೆ. ಉದಾಹರಣೆಗೆ ನಗರದ ಕುಚ್ಚಪ್ಪನ ಪೇಟೆಯ ಅರಳಿ ಕಟ್ಟೆಯಲ್ಲಿ  ಮಾರುಕಟ್ಟೆ ಚೌಕ ಶಾಲೆಯ ಮಕ್ಕಳು ಕಲಿಯುತ್ತಿದ್ದಾರೆ. ಆದರೆ ಮಕ್ಕಳ ಕಲಿಕೆಗೆ ಸೂಕ್ತ ಸ್ಥಳಾವಕಾಶವಿಲ್ಲ. ಮಳೆ, ಗಾಳಿ ಹಾಗೂ ವಾಹನ ಸಂಚಾರ, ಜನ ಸಂಚಾರದತ್ತ ಮಕ್ಕಳು ಗಮನ ನೀಡುತ್ತಿದ್ದರೆ ಶಿಕ್ಷಕರಿಗೆ ಮಕ್ಕಳನ್ನು ಹಿಡಿದಿಡುವುದೇ ಕಷ್ಟವಾಗುತ್ತಿದೆ. ಇನ್ನು ಸಾರ್ವಜನಿಕ ಸ್ಥಳ ಎಂದ ಮೇಲೆ ಬೇರೆಯವರನ್ನು ಬರಬೇಡಿ ಎಂದು ಹೇಳಲಾಗುವುದಿಲ್ಲ.  ಹತ್ತಾರು ಜನ ಓಡಾಡುತ್ತಿರುತ್ತಾರೆ. ಈಗ ಇದೇ ಸ್ಥಳದ ಸಮೀಪ ಮಾರಮ್ಮ ದೇವಾಲಯದಲ್ಲಿ ಮಕ್ಕಳಿಗೆ ಪಾಠ ಹೇಳಲಾಗುತ್ತಿದ್ದರೂ ಅಲ್ಲಿ ಸಹ ಸ್ಥಳಾವಕಾಶ ಕಡಿಮೆ ಇದೆ ಎಂದು ಪೋಷಕರು ದೂರಿದ್ದಾರೆ.

ಶಾಲೆಗಳಲ್ಲಿಯೇ ಅವಕಾಶ ನೀಡಿ: 

ಸೆ.21 ರಿಂದ 9 ರಿಂದ 12ರವರೆಗೆ ಶಾಲೆಗಳ ಆರಂಭಕ್ಕೆ ಕೇಂದ್ರ ಸರ್ಕಾರ ಚಂತನೆ ನಡೆಸಿದ್ದು, ಮಾರ್ಗಸೂಚಿಗಳು ಬಿಡುಗಡೆಯಾಗಲಿವೆ. ಆದರೆ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಆರಂಭವಾಗುವುದು ಅನುಮಾನವಾಗಿದ್ದು, ಮಕ್ಕಳು ಶಾಲೆಯ ಸಂಪರ್ಕಕ್ಕಂತೂ ಬರುವ ವಾತಾವರಣ ಸೃಷ್ಟಿಯಾಗಲಿದೆ.

ಅರಳಿ ಕಟ್ಟೆ , ದೇವಾಲಯದ ಆವರಣಗಳಿಗೆ ಹೋಲಿಸಿದರೆ, ಶಾಲೆಗಳಲ್ಲಿಯೇ ವಿಶಾಲವಾದ ಜಾಗವಿದೆ. ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆಯಿದೆ. ಹೀಗಾಗಿ ಮಕ್ಕಳನ್ನು ಪಾಳಿ ಪದ್ದತಿಯಲ್ಲಿ ಕರೆಸಿಕೊಂಡು ಪಾಠ ಮಾಡಬಹುದಾಗಿದೆ. ಮಕ್ಕಳ ಸ್ಥಳದ ಆಯ್ಕೆ ಬಗ್ಗೆ ಶಾಲಾ ಶಿಕ್ಷಕಕರಿಗೆ ನಿರ್ಧಾರ ಕೈಗೊಳ್ಳಲು ಬಿಡಬೇಕು. ಒಟ್ಟಿನಲ್ಲಿ ಮಕ್ಕಳ ಕಲಿಕೆಗೆ ಯಾವುದೇ ತೊಂದರೆಯಾಗದಂತೆ ಅವಕಾಶ ಕಲ್ಪಿಸಬೇಕು ಎನ್ನುತ್ತಾರೆ ಪೋಷಕ ನಾಗರಾಜ್.

ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳಂತೆ ವಿದ್ಯಾಗಮ: ಬೈಯಪ್ಪರೆಡ್ಡಿ,  ಕ್ಷೇತ್ರಶಿಕ್ಷಣಾಕಾರಿ.

ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳಂತೆ ವಿದ್ಯಾಗಮ ನಡೆಸಲಾಗುತ್ತಿದೆ. ಶಾಲೆಗಳಲ್ಲಿ ಪಾಠ ಪ್ರವಚನಗಳ ಕುರಿತಾಗಿ ನಮಗೆ ಸೂಚನೆ ಬಂದಿಲ್ಲ. ಆದರೆ ಮಕ್ಕಳನ್ನು ಪಾಲಿ ಪದ್ದತಿಯಲ್ಲಿ, ಶಾಲೆಗೆ ಸಮೀಪದ ಸೂಕ್ತ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು, ಕೊವಿಡ್-19 ಮಾರ್ಗಸೂಚಿಗಳನ್ನು ಪಾಲಿಸಿ, ಪಾಠಗಳನ್ನು ಮಾಡಲು ಸೂಚಿಸಲಾಗಿದೆ. ಸರ್ಕಾರದ ಆದೇಶ ಬಂದರೆ ಶಾಲೆಗಳಲ್ಲಿಯೇ ಅವಕಾಶ  ಕಲ್ಪಿಸಲಾಗುವುದು.

ವಿಶೇಷ ವರದಿ: ಡಿ.ಶ್ರೀಕಾಂತ

ರಾಜಕೀಯ

ಇ-ಸ್ವತ್ತು ಅರ್ಜಿ ಸಲ್ಲಿಕೆ ಮತ್ತಷ್ಟು ಸುಲಭ; ಪ್ರಿಯಾಂಕ್ ಖರ್ಗೆ

ಇ-ಸ್ವತ್ತು ಅರ್ಜಿ ಸಲ್ಲಿಕೆ ಮತ್ತಷ್ಟು ಸುಲಭ; ಪ್ರಿಯಾಂಕ್ ಖರ್ಗೆ

ಇ-ಸ್ವತ್ತು (E-property) ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ (IT/BT) ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು

[ccc_my_favorite_select_button post_id="121357"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]