ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ #HindiDiwas ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಹಿಂದಿ ದಿವಸ್ ಕುರಿತು ಪರ,ವಿರೋಧದ ಚರ್ಚೆ ನಡುವೆ ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು.ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು. 

ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು. 

ಕೇಂದ್ರದ ಆಡಳಿತದಲ್ಲಿ ಹಿಂದಿ ಜಾರಿಗೆ ಬಂದಿದ್ದಕ್ಕಾಗಿ, ಹಿಂದಿ ಜಾರಿ ಹೋರಾಟ ಮಾಡಿದ ಬೋಹರ್‌ ರಾಜೇಂದ್ರ ಸಿಂಹ ಜನ್ಮದಿನದ ನೆನಪಿಗಾಗಿ ಸೆ. 14ರಂದು ಹಿಂದಿ ದಿವಸ ಆಚರಿಸಲಾಗುತ್ತಿದೆ. ರಾಜೇಂದ್ರ ಸಿಂಹ ಹುಟ್ಟುಹಬ್ಬದಲ್ಲಿ, ಹಿಂದಿ ಆಡಳಿತ ಭಾಷೆ ಆಗಿದ್ದರಲ್ಲಿ ಹಿಂದಿಯೇತರರು ಸಂಭ್ರಮಿಸುವುದು ಏನಿದೆ. ನಿರ್ಥಕ ಹಿಂದಿ ದಿವಸ ರದ್ದಾಗಬೇಕು. 

ಅನ್ಯ ಭಾಷಿಕರಿಗೆ ನಿರರ್ಥಕವಾಗಿರುವ ಹಿಂದಿ ದಿವಸವನ್ನು ಆಚರಿಸುವುದೇ ಆದರೆ, ಹಿಂದಿಯೊಂದಿಗೆ ಅಧಿಕೃತ ಭಾಷೆಗಳೆನಿಸಿರುವ ಕನ್ನಡವೂ ಸೇರಿದಂತೆ ಎಲ್ಲ ಭಾಷೆಗಳ ದಿನವನ್ನು ಕೇಂದ್ರ ಸರ್ಕಾರವೇ ದೇಶದಾದ್ಯಂತ ಆಚರಣೆ ಮಾಡಬೇಕು. ಇದಕ್ಕಾಗಿ ಪ್ರತ್ಯೇಕ ದಿನವನ್ನೂ ಘೋಷಣೆ ಮಾಡಬೇಕು. ನವೆಂಬರ್‌ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು. 

ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಗೊಂದಲಕಾರಿ ಅಂಶಗಳಿವೆ. ಇದೇ ಗುರಾಣಿ ಹಿಡಿದು ಹಿಂದಿ ಹೇರಿಕೆ ಪ್ರಯತ್ನಗಳು ನಿರಂತರವಾಗಿ ನಡೆದಿದೆ. ಸಂವಿಧಾನವನ್ನು ಬದಲಿಸಲೇ ಬಂದಿರುವ ಬಿಜೆಪಿಗರು, ಒಂದೊಳ್ಳೆ ಕಾರಣಕ್ಕಾಗಿ ಇದನ್ನು ಬದಲಿಸಲಿ. ಈ ಮೂಲಕ ಕನ್ನಡವೂ ಸೇರಿ ಅನ್ಯ ಭಾಷೆಗಳ ಅಸ್ಮಿತೆಯನ್ನು ರಕ್ಷಿಸಲಿ. 

ಹಿಂದಿ ದಿವಸದಂತೇ, ತ್ರಿಭಾಷಾ ಸೂತ್ರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯೂ ಹಿಂದಿ ಹೇರಿಕೆಯ ಮಾರ್ಗವೇ. ದ್ವಿಭಾಷಾ ಸೂತ್ರವೇ ಇದ್ದರೆ ನಷ್ಟವೇನು? ಹಿಂದಿ ಮಾತನಾಡುವ ಯಾವ ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಜಾರಿಯಲ್ಲಿದೆ? ಹಾಗಿದ್ದಮೇಲೆ ಹಿಂದಿಯೇತರ ರಾಜ್ಯಗಳಿಗೆ ಮಾತ್ರ ಏಕೆ ತ್ರಿಭಾಷಾ ಸೂತ್ರ? ಎನ್‌ಇಪಿಯನ್ನು ರಾಜ್ಯ ಸರ್ಕಾರ ಒಪ್ಪಬಾರದು. 

ಇತ್ತೀಚೆಗೆ ಹಿಂದಿಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇಂಥ ಪ್ರಯತ್ನಗಳಿಗಿಂತಲೂ ದೊಡ್ಡ ದೇಶದ್ರೋಹ ಇನ್ನೊಂದಿಲ್ಲ. ವಿವಿಧ ಭಾಷೆಗಳನ್ನು ಆಡುವ ಭಾರತೀಯರ ದೇಶಭಕ್ತಿಯನ್ನು ಭಾಷೆ ಮೂಲಕ ಅಳೆಯುವುದು ಅಪಚಾರವೇ ಸರಿ. ಇದು ಸಮಗ್ರತೆಗೆ ಎಸೆದ ಸವಾಲು. 

ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಹಿಂದಿಯನ್ನು ಸುಲಭವಾಗಿ ಹೇರಬಹುದು ಎಂದು ಹಿಂದಿ ಶ್ರೇಷ್ಠತೆ ವ್ಯಸನಿಗಳು ಅಂದಾಜಿಸಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ನಾಯಕರ ನಡತೆಯೂ ಕಾರಣವಿರಬಹುದು. ಕನ್ನಡಿಗರದ್ದು ಸೌಹಾರ್ದ ಗುಣ. ಅದನ್ನು ದೌರ್ಬಲ್ಯ ಎಂದೆಣಿಸುವುದು ಬೇಡ. ಕನ್ನಡಿಗರ ಐತಿಹಾಸಿಕವಾದ ಮತ್ತೊಂದು ಗುಣ ಸಿಡಿದರೆ ಎಲ್ಲರೂ ತರಗೆಲೆಗಳೇ.

ಕಾವೇರಿಯಿಂದ ಗೋದಾವರಿವರೆಗೆ ಆಳಿದ, ಇಂದಿನ ಕರ್ನಾಟಕಕ್ಕಿಂತಲೂ ಹಲವು ಪಟ್ಟು ರಾಜ್ಯ ವಿಸ್ತರಣೆ ಮಾಡಿದ್ದ ಕನ್ನಡಿಗರಲ್ಲಿ ಶೌರ್ಯ, ಸ್ವಾಭಿಮಾನ ರಕ್ತಗತ. ಹಿಂದಿಯನ್ನು ಬಲವಂತವಾಗಿ ಹೇರುವ ಪ್ರಯತ್ನಗಳ ವಿರುದ್ಧ ಕನ್ನಡಿಗರ ಈ ಚಾರಿತ್ರಿಕ ಗುಣ ಎದ್ದು ನಿಂತರೆ ಹಿಂದಿ ಹೇರಲು ಬರುವವರ ಕುತಂತ್ರಗಳು ಅಡಗಲಿದೆ. 

ಜೈ ಕನ್ನಡಾಂಬೆ, ಜೈ ಭಾರತಾಂಭೆ ಎಂದಿದ್ದಾರೆ.

ರಾಜಕೀಯ

ಇ-ಸ್ವತ್ತು ಅರ್ಜಿ ಸಲ್ಲಿಕೆ ಮತ್ತಷ್ಟು ಸುಲಭ; ಪ್ರಿಯಾಂಕ್ ಖರ್ಗೆ

ಇ-ಸ್ವತ್ತು ಅರ್ಜಿ ಸಲ್ಲಿಕೆ ಮತ್ತಷ್ಟು ಸುಲಭ; ಪ್ರಿಯಾಂಕ್ ಖರ್ಗೆ

ಇ-ಸ್ವತ್ತು (E-property) ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ (IT/BT) ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು

[ccc_my_favorite_select_button post_id="121357"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]