ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದೇವನಹಳ್ಳಿ ಮತ್ತು ಹೊಸಕೋಟೆ ತಾಲ್ಲೂಕುಗಳಲ್ಲಿ ಖಾಲಿಯಿರುವ ಗ್ರಾಮ ಪಂಚಾಯಿತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ದೊಡ್ಡಬಳ್ಳಾಪುರ ನಗರಸಭೆಗೆ ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಕಲಚೇತನರ ಸಮಸ್ಯೆ ಹಾಗೂ ಅಗತ್ಯಗಳನ್ನು ಅರಿತು, ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬ ವಿ.ಆರ್.ಡಬ್ಲ್ಯೂ. ಅನ್ನು ಗೌರವಧನದ ಆಧಾರದಲ್ಲಿ ನೇಮಕ ಮಾಡಬೇಕಾಗಿದೆ. 

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಗೌರವಧನದ ಹುದ್ದೆಗೆ ನೇಮಕಾತಿಗಾಗಿ ಈಗಾಗಲೇ ಅರ್ಜಿ ಆಹ್ವಾನಿಸಿದ್ದು, ಹೊಸಕೋಟೆ ಮತ್ತು ದೇವನಹಳ್ಳಿ ತಾಲ್ಲೂಕುಗಳಲ್ಲಿ ಖಾಲಿ ಪಂಚಾಯಿತಿಗಳಿಗೆ ಗ್ರಾಮೀಣ ಪುವರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿಗಳು ಸ್ವೀಕೃತವಾಗದ ಕಾರಣ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿ ಈ ಹಿಂದೆ ನಿಗದಿ ಪಡಿಸಿದ್ದ ಸೆಪ್ಟೆಂಬರ್ 07 ಅನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ದೇವನಹಳ್ಳಿ ತಾಲ್ಲೂಕಿನ ಮಂಡಿಬೆಲೆ, ವಿಶ್ವನಾಥಪುರ, ಕುಂದಾಣ, ಆಲೂರುದುದ್ದನಹಳ್ಳಿ, ಕೊಯಿರಾ, ಜಾಲಿಗೆ, 

ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ, ಅನುಗೊಂಡನಹಳ್ಳಿ, ದೇವನಗೊಂದಿ ಹಾಗೂ   ದೊಡ್ಡಬಳ್ಳಾಪುರ ನಗರಸಭೆಯಲ್ಲಿ ನೇಮಕಾತಿ ನಡೆಯಲಿದ್ದು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಆಸಕ್ತ ವಿಕಲಚೇತನ ವ್ಯಕ್ತಿಗಳು ಹಾಗೂ 

ದೊಡ್ಡಬಳ್ಳಾಪುರ ನಗರಸಭೆಗೆ ನಗರ ಪುನರ್ವಸತಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸಲು ನಗರ ವ್ಯಾಪ್ತಿಯಲ್ಲಿ ವಾಸಿಸುವ ಆಸಕ್ತ ವಿಕಲಚೇತನ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು 2020ರ ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.

ಗೌರವ ಧನದ ಹುದ್ದೆಗೆ ಇರಬೇಕಾದ ಅರ್ಹತೆಗಳು: 

ನಗರ/ಗ್ರಾಮೀಣ ಪುನರ್ವಸತಿ ಕಾರ್ಯಕರ್ತ (VRW) ಗೌರವಧನ ಮಾಹೆಯಾನ ರೂ. 6,000/-, ಶೇಕಡಾ 40 ಹಾಗೂ ಅದಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರಬೇಕು. (ಅಂಗವಿಕಲರ ಗುರುತಿನ ಚೀಟಿ (ಯು.ಡಿ.ಐ.ಡಿ) ಝರಾಕ್ಸ್ ಪ್ರತಿ ಲಗತ್ತಿಸಬೇಕು.), ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರದವರಿಗೆ ಆದ್ಯತೆ. ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರದವರು ಸಿಗದೆ ಇದ್ದ ಸಂದರ್ಭದಲ್ಲಿ ಅನುತ್ತೀರ್ಣರಾದವರನ್ನು ಪರಿಗಣಿಸಲಾಗುವುದು, 18-45 ವಯೋಮಿತಿಯಲ್ಲಿದ್ದು, ಆರೋಗ್ಯವಂತರಾಗಿರಬೇಕು, ನಗರಸಭೆ/ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ/ಸೌಲಭ್ಯ ಕಲ್ಪಿಸಲು ಸಮರ್ಥರಾಗಿರಬೇಕು, ಮಾಹೆಯಾನ ರೂ. 5850 ಗೌರವಧನ ನೀಡಲಾಗುವುದು. ಹಾಗೂ ಪ್ರವಾಸ, ಲೇಖನಸಾಮಗ್ರಿ ಹಾಗೂ ಆಡಳಿತ ವೆಚ್ಚಕ್ಕಾಗಿ ರೂ.150-00 ನೀಡಲಾಗುವುದು, ಗೌರವಧನದ ನೇಮಕಾತಿಯು ಒಂದು ವರ್ಷದ ನಂತರ ಪುನರ್‍ಪರಿಶೀಲನೆಗೆ ಒಳಪಟ್ಟಿರುತ್ತದೆ, ಪುನರ್ ಪರಿಶೀಲನೆಯಲ್ಲಿ ಕೆಲಸ ಕಾರ್ಯಗಳ ನಿರ್ವಹಣೆ, ಅಂಗವಿಕಲರೊಂದಿಗೆ ಸಂಬಂಧ ವಿವಿಧ ಇಲಾಖೆಗಳೊಂದಿಗೆ/ಸ್ವಯಂ ಸೇವಾ ಸಂಸ್ಥೆ/ ಸಮುದಾಯದೊಂದಿಗೆ ವಿಕಲಚೇತನ ಅಭಿವೃದ್ಧಿಗಾಗಿ ಇಟ್ಟುಕೊಂಡಿರುವ ಸಂಬಂಧಗಳನ್ನು ಪರಿಶೀಲಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು, ಸದರಿ ಹುದ್ದೆಯು ಗೌರವಧನದ ಆಧಾರದ ಮೇಲೆ ಇರುವುದರಿಂದ ಇವರನ್ನು ಯಾವಾಗ ಬೇಕಾದರೂ ಕೆಲಸದಿಂದ ತೆಗೆದು ಹಾಕಬಹುದಾಗಿದೆ /ಬಿಡುಗಡೆ ಮಾಡಬಹುದಾಗಿದೆ, ಗೌರವಧನ ಆಧಾರದ ಮೇಲೆ ಕೆಲಸ ನಿರ್ವಹಿಸುವುದರಿಂದ ಖಾಯಂಗೊಳಿಸಲು ಕೋರಲು ಅವಕಾಶವಿರುವುದಿಲ್ಲ, ಭಾಗಶ: ದೃಷ್ಟಿದೋಷವುಳ್ಳವರು, ಭಾಗಶ: ಶ್ರವಣದೋಷವುಳ್ಳವರು, (ಮೈಲ್ಡ್ ಮತ್ತು ಮಾಡರೇಟ್) ಅಂಗವಿಕಲರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ, ಸಂಬಂದ ಪಟ್ಟ ನಗರ/ಪಂಚಾಯಿತಿ  ವಾಪ್ತಿಯಲ್ಲಿ ವಾಸವಿರುವ ಬಗ್ಗೆ ತಹಸೀಲ್ದಾರರಿಂದ ವಾಸ ಸ್ಥಳ ದೃಢೀಕರಣ ಪತ್ರ ಲಗತ್ತಿಸುವುದು ಕಡ್ಡಾಯವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಹಾಗೂ ವಿಕಲಚೇತನರ ಸಹಾಯವಾಣಿ ದೂ.ಸಂ.: 080-29787441 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ 

ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಅಣ್ಣಾವ್ರ ಹೆಸರು ಹೇಳೋಕೆ ಚೇತನ್‌ಗೆ ಯೋಗ್ಯತೆ ಇಲ್ಲ: ನಿಖಿಲ್ ಕುಮಾರಸ್ವಾಮಿ ಕಿಡಿ

ಅಣ್ಣಾವ್ರ ಹೆಸರು ಹೇಳೋಕೆ ಚೇತನ್‌ಗೆ ಯೋಗ್ಯತೆ ಇಲ್ಲ: ನಿಖಿಲ್ ಕುಮಾರಸ್ವಾಮಿ ಕಿಡಿ

ಅಣ್ಣಾವ್ರ ಹೆಸರು ಹೇಳೋದಕ್ಕೆ ಚೇತನ್ (Chethan) ಅವರಿಗೆ ಯೋಗ್ಯತೆ ಇಲ್ಲ, ಅವರೊಬ್ಬ ಪ್ರಚಾರ ಪ್ರಿಯರು. ಡಾ. ರಾಜ್ ಕುಮಾರ್ (Dr. Rajkumar) ಅವರ ಸ್ಮಾರಕ ಬಗ್ಗೆ ಮಾತನಾಡಲು ಅವರು ಯೋಗ್ಯರಲ್ಲ" ಎಂದು ಯುವ ಜನತಾದಳ

[ccc_my_favorite_select_button post_id="121430"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]