ದೊಡ್ಡಬಳ್ಳಾಪುರ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡದವರಿಗಾಗಿ ಶಿಷ್ಯ ವೇತನ ಹಾಗೂ ಇತರೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಹ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಾನೂನು ಪದವೀಧರರ ಶಿಷ್ಯವೇತನ, ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಸರಳವಾಗಿ ವಿವಾಹ ಮಾಡಿಕೊಳ್ಳುವ ಪರಿಶಿಷ್ಟ ಪಂಗಡಕ್ಕೆ ಸೇರಿದ ದಂಪತಿಗಳಿಗೆ ಸರಳ ವಿವಾಹ ಯೋಜನೆಯಡಿ ಪ್ರೋತ್ಸಾಹಧನ, ಪರಿಶಿಷ್ಟ ಪಂಗಡದ ಯುವಕ/ಯುವತಿಯರು ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ಅಂತರ್‌ಜಾತಿ ವಿವಾಹವಾದಲ್ಲಿ ಅಂತಹವರಿಗೆ ಪ್ರೋತ್ಸಾಹಧನ, ಪರಿಶಿಷ್ಟ ಪಂಗಡದ ವಿಧವೆಯರು ಮರು ವಿವಾಹವಾದಲ್ಲಿ ಅಂತಹವರಿಗೆ ಪ್ರೋತ್ಸಾಹಧನ ಹಾಗೂ
ಪರಿಶಿಷ್ಟ ಪಂಗಡದವರು ಅಂತರ್ಜಾತಿ ವಿವಾಹವಾದಲ್ಲಿ ಅಂತಹವರಿಗೆ ಪ್ರೋತ್ಸಾಹಧನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಸದರಿ ಕಾರ್ಯಕ್ರಮಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲಾಖಾ ವೆಬ್‍ಸೈಟ್ www.tw.kar.nic.in ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಆನ್‍ಲೈನ್‍ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಬೆಂಗಳೂರು ಗ್ರಾಮಾಂತರ
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ.: 080-29787448, 080-22261789 ಅನ್ನು ಸಂಪರ್ಕಿಸಬಹುದಾಗಿದೆ ಎಂದು
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

