ದೊಡ್ಡಬಳ್ಳಾಪುರದಲ್ಲಿ ಭರವಸೆ ಯೋಜನೆಗೆ ಚಾಲನೆ ನೀಡಿದ ರವಿ ಡಿ.ಚನ್ನಣ್ಣನವರ್

ದೊಡ್ಡಬಳ್ಳಾಪುರ: ರಾಜ್ಯವನ್ನು ಮಾದವಸ್ತುಗಳ ಮಾರಾಟದಿಂದ ಮುಕ್ತವಾಗಿಸುವ ನಿಟ್ಟಿನಲ್ಲಿ ಪೊಲೀಸರು ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪೊಲೀಸರ ಕೆಲಸಕ್ಕೆ ಸಾರ್ವಜನಿಕರ ಸಹಕಾರವು ಮುಖ್ಯ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ಹೇಳಿದರು.

ಅವರು ನಗರದಲ್ಲಿ ಪೊಲೀಸ್ ಇಲಾಖೆ ಹಾಗೂ ವಿವಿಧ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ  ಸಹಕಾರದೊಂದಿಗೆ ಬುಧವಾರ ಪ್ರಾರಂಭವಾದ ಭರವಸೆ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. 

ಜಿಲ್ಲೆಯಲ್ಲಿ ಗಾಂಜಾ ಸೊಪ್ಪು ಬೆಳೆಸುತ್ತಿದ್ದ ಹಾಗೂ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದವರ ವಿರುದ್ದ 40 ಪ್ರಕರಣಗಳು ದಾಖಲಾಗಿದ್ದು,52 ಜನರನ್ನು ಬಂಧಿಸಲಾಗಿದೆ. ಇದಲ್ಲದೆ ಜಿಲ್ಲೆಗೆ ಮಾದಕವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿ ಇಸ್ಮಾಯಿಲ್ಖಾನ್ ಎಂಬಾತನನ್ನು ಬಂಧಿಸಲಾಗಿದೆ ಎಂದರು.

ಲಾಕ್‌ಡೌನ್‌ ನಂತರ ರೈತರು ಸೇರಿದಂತೆ ಹಲವಾರು ಜನರ ಉದ್ಯೋಗಗಳಲ್ಲಿ ಸಾಕಷ್ಟು ಬದಲಾವಣೆಯಾಗಿವೆ.ಸಾಕಷ್ಟು ಜನ ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ. ಇದಲ್ಲದೆ ನಗರ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಅಂತರವು ಇದೆ. ಈ ಎಲ್ಲವನ್ನು ಸರಿಪಡಿಸುವ ಮೂಲಕಿ ಪೊಲೀಸ್ ಇಲಾಖೆ ಜನಸ್ನೇಹಿಯಾಗಿಯು ಕೆಲಸ ಮಾಡುವ ನಿಟ್ಟಿನಲ್ಲಿ ಸ್ವಯಂ ಸೇವಾ ಸಂಸ್ಥೆಗಳೊಂದಿಗೆ ಕೆಲಸ ಆರಂಭಿಸಲಾಗಿದೆ. ಈ ನಿಟ್ಟಿನಲ್ಲಿ ಭರವಸೆ ತಂಡಲ್ಲಿ ಶಿಕ್ಷಣ, ಕೃಷಿ,ಕ್ರೀಡೆ ಹಾಗೂ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸುವಲ್ಲಿ ಪರಿಣಿತಿ ಹೊಂದಿರುವ ತಂಡದ ಸದಸ್ಯರು ಕೆಲಸ ಮಾಡಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಡಿವೈಎಸ್ಪಿ ಟಿ.ರಂಗಪ್ಪ, ಮಾದಕವಸ್ತುಗಳ ಮಾರಾಟಗಾರರನ್ನು ಬಂಧಿಸುವ ಕೆಲಸ ಪೊಲೀಸ್ ಇಲಾಖೆ ಮಾಡುತ್ತದೆ.ಆದರೆ ಪೋಷಕರು ನಮ್ಮ ಮಕ್ಕಳು ಏನು ಮಾಡುತ್ತಿದ್ದಾರೆ ಎನ್ನುವ ಕಡೆಗೆ ಸದಾ ನಿಗಾವಹಿಸಬೇಕು.ಯುವ ಸಮುದಾಯ ಚಟಕ್ಕೆ ದಾಸರಾಗದಂತೆ ನೋಡಿಕೊಳ್ಳುವಲ್ಲಿ ಸಾರ್ವಜನಿಕರ ಸಹಕಾರವು ಮುಖ್ಯ ಎಂದರು. 

ಇದೇ ಸಂದರ್ಭದಲ್ಲಿ ಇತ್ತೀಚೆಗೆ ತಾಲ್ಲೂಕಿನ ಹುಲಿಕುಂಟೆ ಗ್ರಾಮದ ತೋಟದ ಮನೆ ದರೋಡೆ ಸಂದರ್ಭದಲ್ಲಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಶ್ರಮಿಸಿದ ಸಿಬ್ಬಂದಿಗೆ ಪ್ರಶಂಸಾ ಪತ್ರಗಳನ್ನು ನೀಡಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಐಜಿಪಿ ಸೀಮಂತ್ ಕುಮಾರ್ ಸಿಂಗ್, ಜಿಲ್ಲಾ  ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀಗಣೇಶ್, ಸರ್ಕಲ್ ಇನ್ಸ್ಪೆಕ್ಟರ್ ರಾಘವ ಎಸ್.ಗೌಡ, ಡಾ.ಮಲ್ಲಿಕಾರ್ಜುನ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಜರಿದ್ದರು.

ರಾಜಕೀಯ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ (Z.P) ಕ್ಷೇತ್ರಗಳ (Constituencies) ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

[ccc_my_favorite_select_button post_id="121409"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]