ಕಲಬುರಗಿ : 73ನೇಯ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಸುಮಾರು 1,300 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಇದಕ್ಕುಮುನ್ನ ಎಸ್ ವಿಪಿ ವೃತ್ತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರ ಪುತ್ತಳಿಗೆ ಸಿಎಂ ಮಾಲಾರ್ಪಣೆ ಮಾಡಿ.ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದರು.ಅಲ್ಲದೆ ಕೆಕೆಆರ್ ಡಿಬಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತ ವಿಶೇಷ ಕೈಪಿಡಿಯನ್ನ ಸಿಎಂ ಬಿಡುಗಡೆ ಮಾಡಿದರು.
ಈ ವೇಳೆ ಮಾತನಾಡಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಳೆ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆಂದು ಎಂದುಕೊಂಡಿರಲಿಲ್ಲ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಏನೇನು ಕಾರ್ಯಕ್ರಮ ರೂಪಿಸಬೇಕು ಅದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ.ಮಳೆಯ ನಡುವೆ ಕಲ್ಯಾಣ ಕರ್ನಾಟಕ ಉತ್ಸವ ಯಶಸ್ವಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, ಎನ್.ಇ.ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ, ಸಂಸದ ಡಾ. ಉಮೇಶ ಜಾಧವ್, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಶಾಸಕರಾದ ಬಸವರಾಜ್ ಮತ್ತಿಮೂಡ ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ತಿನ ಶಾಸಕ ಬಿ.ಜಿ. ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

