ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 52 ಜನರಿಗೆ ಕರೊನಾ ಸೋಂಕು ದೃಢಪಟ್ಟಿದೆ.
ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ, ಭಾನುವಾರ ಸಂಜೆಯವರಗೆ, ದೊಡ್ಡಬಳ್ಳಾಪುರ ತಾಲೂಕಿನ 36 ಪುರುಷರು ಹಾಗೂ 16 ಮಹಿಳೆಯರು ಸೇರಿ, 52ಜನರಿಗೆ ಸೋಂಕು ದೃಢಪಟ್ಟಿದೆ.
ಆಕಾಶ್ ಆಸ್ಪತ್ರೆಗೆ ದಾಖಲಾಗಿದ್ದ ನಗರದ ವಿಶ್ವೇಶ್ವರಯ್ಯ ವೃತ್ತದ 78 ವರ್ಷದ ಪುರುಷ ತೀವ್ರ ಉಸಿರಾಟದ ತೊಂದರೆ ಹಾಗೂ ಅನಿಯಮಿತ ಸಕ್ಕರೆ ಕಾಯಿಲೆಯಿಂದ ಮೃತಪಟ್ಟಿದ್ದಾರೆ.
ಪ್ರಸ್ತುತ ತಾಲೂಕಿನಲ್ಲಿ 2047 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 1337 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದರೆ, 71 ಮಂದಿ ಸಾವನಪ್ಪಿದ್ದಾರೆ.

