ದೊಡ್ಡಬಳ್ಳಾಪುರ: ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ, ಶಾಸಕ ಟಿ.ವೆಂಕಟರಮಣಯ್ಯರ ಕಟ್ಟಾಭಿಮಾನಿ ಕೇಶವ ನಾಯಕ (48) ತೀವ್ರ ಹೃದಯಾಘಾತದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.
ಮೃತ ಕೇಶವನಾಯಕ ಮಡದಿ, ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದು,ಅಂತ್ಯಕ್ರಿಯೆ ಖಾಸ್ ಬಾಗ್ ಸಮೀಪದ ರುದ್ರಭೂಮಿಯಲ್ಲಿ ಇಂದು ಸಂಜೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ಹರಿತಲೇಖನಿಗೆ ತಿಳಿಸಿವೆ
ಕೇಶವ ಅಗಲಿಕೆಗೆ ಶಾಸಕ ಟಿ.ವೆಂಕಟರಮಣಯ್ಯ, ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಾಪಂ ಅಧ್ಯಕ್ಷೆ ರತ್ನಮ್ಮ ಜಯರಾಂ, ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಕಾಂಗ್ರೆಸ್ ಪಕ್ಷದ ನಗರ ಪ್ರಧಾನ ಕಾರ್ಯದರ್ಶಿ ಅಂಜನಮೂರ್ತಿ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಶ್ವಥ್ ರೆಡ್ಡಿ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.

