ದೊಡ್ಡಬಳ್ಳಾಪುರ: ಕಳೆದ ಜೂನ್-ಜುಲೈ ತಿಂಗಳಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದವರಿಗೆ ಮಂಗಳವಾರ ಎಸ್‌ಎಸ್‌ಎಲ್‌ಸಿ ಪ್ರಥಮ ಭಾಷೆಯ ಪೂರಕ ಪರೀಕ್ಷೆಗಳು ಸುಗಮವಾಗಿ ನಡೆದವು. ಯಾವುದೇ ಪರೀಕ್ಷಾ ಅಕ್ರಮಗಳ ಕುರಿತು ವರದಿಯಾಗಿಲ್ಲ.
ಜಿಲ್ಲೆಯ 7 ಪರೀಕ್ಷಾ ಕೇಂದ್ರಗಳಿಂದ 254 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, 30 ಮಂದಿ ಗೈರಾಗಿದ್ದರು. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ಪ್ರಥಮ ಪರೀಕ್ಷೆ ಪರಿಗಣನೆ: ಕಳೆದ ಜೂನ್-ಜುಲೈನಲ್ಲಿ ನಡೆದ ಪರೀಕ್ಷೆಯಲ್ಲಿ ಕೊವಿಡ್-19 ಹಿನ್ನಲೆಯಲ್ಲಿ ಅನಾರೋಗ್ಯದಿಂದ ಪರೀಕ್ಷೆ ಬರೆಯದೇ ಇದ್ದ ಐವರು ವಿದ್ಯಾರ್ಥಿಗಳಿಗೆ ಇಂದು ಪ್ರಥಮ ಪ್ರಯತ್ನ ಎಂದು ಪರಿಗಣಿಸಿ, ಅವಕಾಶ ಕಲ್ಪಿಸಲಾಗಿತ್ತು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಮಾರೇಗೌಡ ತಿಳಿಸಿದ್ದಾರೆ.
ತಾಲೂಕಿನಲ್ಲಿ 5 ವಿದ್ಯಾರ್ಥಿಗಳು ಗೈರು:
ತಾಲೂಕಿನ 2 ಪರೀಕ್ಷಾ ಕೇಂದ್ರಗಳಲ್ಲಿ ೫೩ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಈ ಪೈಕಿ ಒಟ್ಟು 48 ವಿದ್ಯಾರ್ಥಿಗಳು ಹಾಜರಾಗಿದ್ದು, 5 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಕಳೆದ ಜುಲೈನಲ್ಲಿ ನಡೆದ ಪರೀಕ್ಷೆಯಲ್ಲಿ ಕೊವಿಡ್-9 ಕಾರಣದಿಂದ ಅನಾರೋಗ್ಯದಿಂದ ಪರೀಕ್ಷೆ ಬರೆಯದೇ ಇದ್ದ ಒಬ್ಬ ವಿದ್ಯಾರ್ಥಿಯನ್ನು ಇಂದು ಪ್ರಥಮ ಪ್ರಯತ್ನ ಎಂದು ಪರಿಗಣಿಸಿ, ಅವಕಾಶ ಕಲ್ಪಿಸಲಾಗಿತ್ತು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪ ರೆಡ್ಡಿ ತಿಳಿಸಿದ್ದಾರೆ.

