ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಕರೊನಾ ಸೋಂಕು ತಪಾಸಣೆ ನೀಡಲಾಗಿದ್ದ Rapid Antigen Kit ಖಾಲಿಯಾಗಿರುವ ಕಾರಣ, ಎರಡನೇ ದಿನವಾದ ಇಂದೂ ಸಹ ತಾಲೂಕಿನಲ್ಲಿಂದು ಯಾವುದೇ ಕರೊನಾ ಸೋಂಕಿನ ಪ್ರಕರಣಗಳು ವರದಿಯಾಗಿಲ್ಲ.
ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ಬುಲೆಟಿನ್ ಮಾಹಿತಿಯಂತೆ 197 ಮಂದಿಯ ದ್ರವ ಮಾದರಿ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ಕಳಿಸಲಾಗಿದ್ದು,ವರದಿಗಾಗಿ ಕಾಯಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.
ಪ್ರಸ್ತುತ ತಾಲೂಕಿನಲ್ಲಿ 2047 ಮಂದಿಗೆ ಸೋಂಕು ತಗುಲಿದ್ದು, 1430 ಮಂದಿ ಗುಣಮುಖರಾಗಿದ್ದರೆ 71 ಮಂದಿ ಸಾವನಪ್ಪಿದ್ದಾರೆ.
ಸೋಂಕಿಗೆ ಒಳಗಾದ 56 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದ 490 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

