ದೊಡ್ಡಬಳ್ಳಾಪುರ: ನಗರಸಭೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ

ದೊಡ್ಡಬಳ್ಳಾಪುರ: ಪೌರಕಾರ್ಮಿಕರಿಗೆ ಹಿಂದಿಗಿಂತ ಹೆಚ್ಚಿನ ಸೌಲಭ್ಯಗಳು ಈಗ ದೊರಕುತ್ತಿದ್ದು, ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಪೌರ ಕಾರ್ಮಿಕರು ನಿಷ್ಟೆಯಿಂದ ಕಾರ್‍ಯ ನಿರ್ವಹಿಸುವ ಮೂಲಕ ಜನರ ಪ್ರೀತಿ ವಿಶ್ವಾಸ ಗಳಿಸಬೇಕಿದೆ ಎಂದು ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್ ಕರೆ ನೀಡಿದರು.

ಅವರು ನಗರದ ಪುರಭವನದಲ್ಲಿ ನಗರಸಭೆ ವತಿಯಿಂದ ನಡೆದ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದಶಕಗಳ ಹಿಂದೆ ಪೌರಕಾರ್ಮಿಕರಿಗೆ ವೇತನ ಸೇರಿದಂತೆ ಮೂಲ ಸೌಕರ್‍ಯಗಳ ಕೊರತೆ ಎದುರಾಗಿತ್ತು. ಇಂತಹ ಸಂದರ್ಭದಲ್ಲಿ 1993ರಲ್ಲಿ  ಗದಗದಲ್ಲಿ ಪೌರ ಕಾರ್ಮಿಕರ ಸಂಘ ಸ್ಥಾಪಿಸಿದ ಜಿ.ಎಸ್.ಮಂಜುನಾಥ್ ಅವರ ಹೋರಾಟವನ್ನು ನಾವು ಇಂದು ಸ್ಮರಿಸಬೇಕಿದೆ. ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಪ್ರತಿನಿಧಿಯಾಗಿ ಹಲವಾರು ಹೋರಾಟಗಳಲ್ಲಿ ತಾವು ಭಾಗವಹಿಸಿದ್ದನ್ನು ಸ್ಮರಿಸಿದ ಅವರು, ಈ ಹಿಂದೆ ಪೌರ ಕಾರ್ಮಿಕರಲ್ಲಿ ಸಂಘಟನೆಯ ಕೊರತೆಯಿತ್ತು. ಆದರೆ ಈಗ ಸಂಘಟನಾತ್ಮಕವಾಗಿ ತಮಗೆ ಬೇಕಾದ ಸೌಲಭ್ಯಗಳನ್ನು ಪಡೆದು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಅವಕಾಶಗಳಿವೆ ಈ ಹಿಂದೆ 80 ರೂ ವೇತನ ಪಡೆದಿದ್ದ ಕಾರ್ಮಿಕರು ಈಗ ಉತ್ತಮ ವೇತನ ಪಡೆಯುತ್ತಿದ್ದಾರೆ ಎಂದರು.

ಕೊವಿಡ್-19 ಸವಾಲನ್ನು ಎದುರಿಸಿ:

ಕೊವಿಡ್-19 ಸಂದರ್ಭದಲ್ಲಿ ಕೊರೊನಾ ವಾರಿಯರ್‍ಸ್‌ಗಳಂತೆ ಪೌರ ಕಾರ್ಮಿಕರ ಪಾತ್ರ ಸಹ ಮಹತ್ವದ್ದಾಗಿದ್ದು, ಹಿಂದೆಂದಿಗಿಂತಲೂ ಹೆಚ್ಚಿನ ಜವಾಬ್ದಾರಿ ಹಾಗೂ ಕೆಲಸ ಹೆಚ್ಚು ಮಾಡುವ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಪೌರ ಕಾರ್ಮಿಕರು ಹಿರಿಯ ಅಧಿಕಾರಿಗಳನ್ನು ಮೆಚ್ಚಿಸಲು ಕಾರ್ಯ ನಿರ್ವಹಿಸದೇ ತಮ್ಮ ಆತ್ಮ ಸಾಕ್ಷಿಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಅದೇ ದೊಡ್ಡ  ರಾಷ್ಟ್ರ ಪ್ರಶಸ್ತಿ ನೀಡಿದಂತೆ ಎಂದರು.

ನಗರಸಭೆ ಪರಿಸರ ಅಭಿಯಂತರ ಈರಣ್ಣ ಪ್ರಸ್ತಾವಿಕವಾಗಿ ಮಾತನಾಡಿ, ಪೌರ ಕಾರ್ಮಿಕರ ದಿನಾಚರಣೆಯನ್ನು 2007 ರಿಂದ ಪ್ರತಿ ವರ್ಷ ಆಚರಿಸಲಾಗುತ್ತಿದ್ದು, ವರ್ಷವಿಡೀ ದುಡಿಯುವ ಪೌರಕಾರ್ಮಿಕರಿಗೆ ವಿಶ್ರಾಂತಿ ನೀಡಲು ಹಾಗೂ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಲು ದಿನಾಚರಣೆ ಆಚರಿಸಲಾಗುತ್ತಿದೆ. ಪೌರಕಾರ್ಮಿಕರಿಗೆ ನಗರಸಭೆಯ ಶೇ.24.1 ಅನುದಾನದಲ್ಲಿ ವಿವಿಧ ವೈಯಕ್ತಿಕ ಸೌಲಭ್ಯಗಳು ವಸತಿ ಯೋಜನೆಯಲ್ಲಿ 7.5ಲಕ್ಷ ಸಹಾಯಧನ, ನಿವೇಶನ ರಹಿತರಿಗೆ ನಿವೇಶನ ನೀಡಲು ಯೋಜನೆಗಳಿವೆ ಎಂದು ತಿಳಿಸಿದರು.

ಪೌರ ಸೇವಾ ನೌಕರರ ಸೇವಾ ಸಂಘದ ನಗರ ಶಾಖೆ ಅಧ್ಯಕ್ಷ ತಿಪ್ಪಣ್ಣ ,ಉಪಾಧ್ಯಕ್ಷ ಎಂ.ರಾಜರತ್ನಂ, ಜಿಲ್ಲಾ ಖಜಾಂಚಿ ವೆಂಕಟೇಶ ಬಾಬು, ತಾಲೂಕು ಪದಾಧಿಕಾರಿಗಳಾದ ವೆಂಕಟಪ್ಪ,ಸೋಮಯ್ಯ, ನಾರಾಯಣ್,ನಗರಸಭೆ ವ್ಯವಸ್ಥಾಪಕ ಮುಮ್ತಾಜ್, ಅಭಿಯಂತರರಾದ ರಮೇಶ್, ಹರೀಶ್, ಲೆಕ್ಕಪತ್ರ ವಿಭಾಗದ ನಂದೀಶ್, ಶಿಂದೆ, ಹಿರಿಯ ಆರೋಗ್ಯ ನಿರೀಕ್ಷಕರಾದ ರೂಪಾ ಮತ್ತಿತರರು ಭಾಗವಹಿಸಿದ್ದರು.

ಸಮಾರಂಭಕ್ಕೂ ಮುನ್ನ ನಗರಸಭೆ ಮುಂಭಾಗದಿಂದ ಪುರಭವನದವರೆಗೆ ನಗರದ ಪ್ರಮುಖ ಬೀದಿಗಳಲ್ಲಿ ಪೌರಕಾರ್ಮಿಕರ ಮೆರವಣಿಗೆ ನಡೆಯಿತು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]