ವಿಜಯೇಂದ್ರ ಸರ್ವಿಸ್ ಟ್ಯಾಕ್ಸ್ ಮೂಲಕ ರಾಜ್ಯ ಬೊಕ್ಕಸ ಲೂಟಿ: ಸಿದ್ದರಾಮಯ್ಯ

ಬೆಂಗಳೂರು: ಮಗ, ಮೊಮ್ಮಗ ಸೇರಿದಂತೆ ತನ್ನ ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರಾಜೀನಾಮೆ ನೀಡಬೇಕು. ಈ ಇಡೀ ಹಗರಣದ ಬಗ್ಗೆ ನ್ಯಾಯಾಲಯದ ನಿಗಾದಲ್ಲಿ ತನಿಖೆಗೆ ವಿಶೇಷ ತನಿಖಾದಳವನ್ನು ರಚಿಸಬೇಕು ಎಂದು‌ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ‌.

ಅಕ್ರಮ ಹಣ ವರ್ಗಾವಣೆ ಕುರಿತು ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮೇಲಿನ ಆರೋಪ ಕುರಿತು ಅಭಿಪ್ರಾಯ ವ್ಯಕ್ತಪಡಿರುವ ಸಿದ್ದರಾಮಯ್ಯ, ನಾ ಖಾವುಂಗಾ ನಾ ಖಾನೆ ದೂಂಗಾ ಎನ್ನುತ್ತಲೇ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಈ ಘೋಷಣೆಯನ್ನು ‘ಮೈ ಖಾವುಂಗಾ ಔರ್ ಖಾನೆ ದೂಂಗಾ’ ಎಂದು ತಕ್ಷಣ ಬದಲಾಯಿಸಿಕೊಳ್ಳುವುದು ಒಳಿತು. ಈ ಭ್ರಷ್ಟಾಚಾರದ ಹಣದಲ್ಲಿ ತನ್ನ ಪಾಲೆಷ್ಟು ಎನ್ನುವುದನ್ನು ಕೂಡಾ ನರೇಂದ್ರ ಮೋದಿಯವರು ತಿಳಿಸಬೇಕು.

ಅವೈಜ್ಞಾನಿಕ ಜಿಎಸ್‌ಟಿ ಮೂಲಕ ದೇಶದ ಜನರನ್ನು ಲೂಟಿ ಮಾಡುತ್ತಿರುವ ನರೇಂದ್ರಮೋದಿಯವರ ಜೊತೆ ಪೈಪೋಟಿಗೆ ಇಳಿದಿರುವ ಬಿಎಸ್‌ವೈ ಅವರು ತನ್ನ ಮಗ ವಿಜಯೇಂದ್ರನ ಮೂಲಕ ವಿಎಸ್‌ಟಿ (ವಿಜಯೇಂದ್ರ ಸರ್ವಿಸ್ ಟ್ಯಾಕ್ಸ್) ಮೂಲಕ ರಾಜ್ಯದ ಬೊಕ್ಕಸವನ್ನು ಲೂಟಿ ಮಾಡುತ್ತಿದ್ದಾರೆ.

ಮುಖ್ಯಮಂತ್ರಿಗಳ ಮಗ ಮತ್ತು ಮೊಮ್ಮಗ ಸೇರಿ ಟೆಂಡರ್ ಪ್ರಕ್ರಿಯೆ ಸಂಪೂರ್ಣ ಮುಗಿದಿರುವ ಕಾಮಗಾರಿಯಲ್ಲಿ ವರ್ಕ್ ಆರ್ಡರ್ ಕೊಡುವ ಹಂತದಲ್ಲಿ ಗುತ್ತಿಗೆದಾರರೊಬ್ಬರಿಂದ 17 ಕೋಟಿ ಹಣ ವಸೂಲಿಗೆ ಇಳಿದಿದ್ದು, ಈ ವ್ಯವಹಾರ ಕುದುರಿಸಿದ ಇಡೀ ಲಂಚಾವತಾರವನ್ನು ಮಾಧ್ಯಮ ಸಂಸ್ಥೆಯೊಂದು ಬಯಲಿಗೆಳೆದಿದೆ. 

ರಾಜಾರೋಷವಾಗಿ ಹಣ ಒಂದೆಡೆಯಿಂದ ಇನ್ನೊಂದು ಕಡೆಗೆ ವರ್ಗಾವಣೆಯಾಗಿದೆ. ಒಂದು ಮೂಲದ ಮಾಹಿತಿಯ ಪ್ರಕಾರ ರಾಜ್ಯಗಳ ಗಡಿ ದಾಟಿ ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮುಂತಾದ ರಾಜ್ಯಗಳಲ್ಲಿರುವ ಕಂಪೆನಿಗಳಲ್ಲಿ ಹಣ ಹೂಡಿಕೆಯಾಗಿದೆ. ಇದನ್ನು ಮನಿ ಲಾಂಡರಿಂಗ್ ಕಾಯ್ದೆಯಡಿ ತನಿಖೆಗೊಳಪಡಿಸಬೇಕಾಗುತ್ತದೆ.

ಇಡೀ ಭ್ರಷ್ಟಾಚಾರದಲ್ಲಿ ಹಣ ಯಾರ ಕೈಲಿ ಕೊಡಬೇಕು? ಯಾರನ್ನು ಸಂಪರ್ಕಿಸಬೇಕು? ಎಲ್ಲಿ-ಎಷ್ಟೊತ್ತಿಗೆ ಸಂಪರ್ಕಿಸಬೇಕು? ಬಾಕಿ ಹಣವನ್ನು ಯಾವಾಗ, ಯಾವ ಖಾತೆಗೆ ವರ್ಗಾಯಿಸಬೇಕು ಎನ್ನುವುದನ್ನೆಲ್ಲಾ ವಾಟ್ಸಾಪ್ನಲ್ಲಿ ಚರ್ಚಿಸಿದ್ದಾರೆ. ಯಡಿಯೂರಪ್ಪ ಅವರ ಮೊಮ್ಮಗ ತನ್ನ ಖಾತೆಗೆ ಹಣ ವರ್ಗಾಯಿಸಿಕೊಂಡಿರುವುದಕ್ಕೆ ಸ್ಪಷ್ಟ ಸಾಕ್ಷ್ಯಗಳಿವೆ. 

ಗುತ್ತಿಗೆದಾರರಿಗೆ ವರ್ಕ್ ಆರ್ಡರ್ ಕೊಡಲು ವಿಜಯೇಂದ್ರ ಹೆಸರಲ್ಲಿ ಬಿಡಿಎ ಕಮಿಷನರ್ ಪ್ರಕಾಶ್ ಗುತ್ತಿಗೆದಾರರಿಂದ ರೂ.12 ಕೋಟಿ ಕೇಳುತ್ತಾರೆ. ಈ ಹಣ 37 ಕ್ರೆಸೆಂಟ್ ಹೋಟೆಲಿನ ಮಾಲೀಕ ರವಿ ಎನ್ನುವವರ ಮೂಲಕ ಸಂದಾಯವಾಗಿದ್ದನ್ನು ವಿಜಯೆಂದ್ರ ಅವರೇ ಟಿವಿ ಚಾನೆಲ್‌ನ ಸ್ಟ್ರಿಂಗ್ ಆಪರೇಷನ್‌ನಲ್ಲಿ ಒಪ್ಪಿಕೊಂಡಿದ್ದಾರೆ. 

ಸಿಎಂ ಮತ್ತು ಸೂಪರ್ ಸಿಎಂ ಹೆಸರಲ್ಲಿ 12 ಕೋಟಿ ರೂಪಾಯಿ ಸಂದಾಯ ಆಗಿರುವುದನ್ನು ಒಪ್ಪಿಕೊಂಡ ಬಳಿಕವೂ ಆ ಐಎಎಸ್ ಅಧಿಕಾರಿ ಮತ್ತು ಹೋಟೆಲ್ ಮಾಲೀಕರ ವಿರುದ್ಧ ದೂರು ದಾಖಲಿಸದಿರುವುದು, ಕ್ರಮ ಕೈಗೊಳ್ಳದಿರುವುದು, ಅಧಿಕಾರಿಯನ್ನು ಸೇವೆಯಿಂದ ವಜಾಗೊಳಿಸದೆ ಆಶ್ರಯ ನೀಡಲಾಗಿದೆ.  

ಮೊದಲು ಸಂದಾಯವಾಗಿರುವ ರೂ.12 ಕೋಟಿ ತನ್ನ ಕೈಗೆ ಸಿಗದೆ ಅಧಿಕಾರಿ ಕೈಗೆ ಹೋಗಿದೆ. ಆದ್ದರಿಂದ ಒಂದೋ ಐಎಎಸ್ ಅಧಿಕಾರಿ ಕೈಯಿಂದ ಆ 12 ಕೋಟಿ ವಸೂಲಿ ಮಾಡಿ ಒಪ್ಪಿಸು, ಇಲ್ಲವೇ 12 ಕೋಟಿ ಜತೆಗೆ ಇನ್ನೂ 5 ಕೋಟಿ ಸೇರಿಸಿ ತಂದು ಕೊಡಬೇಕು. ಇಲ್ಲದಿದ್ದರೆ ಕೆಲಸ ನಿಲ್ಲಿಸು ವಿಜಯೇಂದ್ರ ಬೆದರಿಸಿದ್ದಾರೆ. 

ಎರಡನೇ ಹಂತದಲ್ಲಿ ಗುತ್ತಿಗೆದಾರರಿಂದ ವಿಎಸ್‌ಟಿ ಸಂಗ್ರಹಿಸಲು ಮುಂದಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ್ ಮರಡಿ ಮತ್ತು ಗುತ್ತಿಗೆದಾರರ ನಡುವಿನ ವಾಟ್ಸಾಪ್ ಚಾಟ್ ಅನ್ನೂ ಮಾಧ್ಯಮ ಸಂಸ್ಥೆ ಬಹಿರಂಗಗೊಳಿಸಿದೆ. 

ಲಂಚದ ರೂ.7.4 ಕೋಟಿಯನ್ನು ತನ್ನ ಖಾತೆಗೆ ಆರ್‌ಟಿಜಿಎಸ್ ಮೂಲಕ ಜಮೆ ಮಾಡಿಸಿಕೊಂಡ ಶಶಿಧರ್ ಮರಡಿ, ಉಳಿದ ನಗದು ಹಣವನ್ನು ಮುಖ್ಯಮಂತ್ರಿಗಳ ಅಳಿಯನಿಗೆ ಹುಬ್ಬಳ್ಳಿಯಲ್ಲಿ ತಲುಪಿಸುವಂತೆ ಹೇಳಿರುವ ವಾಟ್ಸಾಪ್ ಚಾಟ್ ವಿವರವನ್ನು ಟಿವಿ ಚಾನೆಲ್ ಬಹಿರಂಗಪಡಿಸಿದೆ. 

ಈ ಭ್ರಷ್ಟಾಚಾರವನ್ನು ಬಯಲಿಗೆಳೆದ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರು ಮತ್ತು ಪತ್ರಕರ್ತರಿಗೆ ಜೀವ ಬೆದರಿಕೆಯೊಡ್ಡಲಾಗುತ್ತಿದೆ. ಕಂಗನಾ ರಣಾವತ್ ಎಂಬ ನಟಿಗೆ ಬೆದರಿಕೆ ಇದೆಯೆಂದು “ವೈ’ ದರ್ಜೆ ಭದ್ರತೆ ನೀಡಲಾಗುತ್ತದೆ. ಹಗರಣವನ್ನು ಬಯಲಿಗೆಳೆದ ಪತ್ರಕರ್ತರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ. ಇದು ಪ್ರಜಾಪ್ರಭುತ್ವವೋ, ರಾಕ್ಷಸ ಪ್ರಭುತ್ವವೋ? 

“ಹೋಂ ನನ್ನ ಕೈಯಲ್ಲಿದೆ’ ಎನ್ನುವ ಮೂಲಕ ಗೃಹ ಇಲಾಖೆಯನ್ನು , ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ಮಾಧ್ಯಮ ಕ್ಷೇತ್ರವನ್ನು ತಮ್ಮ ಬೆರಳ ತುದಿಯಲ್ಲಿ ನಿಯಂತ್ರಿಸುವ ಅಪಾಯಕಾರಿ ಹಂತಕ್ಕೆ ಸೂಪರ್ ಸಿಎಂ ಇಳಿದಿರುವುದು ಭಾರತೀಯ ಜನತಾ ಪಕ್ಷದ ಹೊಸ ಆಡಳಿತ ವೈಖರಿ ಎಂದು ಲೇವಡಿ ಮಾಡಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]