ದೊಡ್ಡಬಳ್ಳಾಪುರ: ಕರೊನಾ ತನ್ನ ರುದ್ರತಾಂಡವ ತಾಲೂಕಿನಲ್ಲಿ ತೀವ್ರಗೊಳಿಸಿದ್ದು, ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ಕಳಿಸಲಾಗಿದ್ದ ದ್ರವ ಪರೀಕ್ಷೆಯಲ್ಲಿ ತಾಲೂಕಿನ 144 ಜನರಿಗೆ ಸೋಂಕು ದೃಢಪಟ್ಟಿದೆ.
ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 144 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರೆ,43 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ, ದೊಡ್ಡಬಳ್ಳಾಪುರ ತಾಲೂಕಿನ 110 ಪುರುಷರು ಹಾಗೂ 34 ಮಹಿಳೆಯರು ಸೇರಿ,144 ಜನರಿಗೆ ಸೋಂಕು ದೃಢಪಟ್ಟಿದೆ.
ಅಲ್ಲದೆ ಆರೋಗ್ಯ ಇಲಾಖೆ ಮೂಲಗಳಿಂದ ಹರಿತಲೇಖನಿಗೆ ದೊರೆತಿರುವ ಮಾಹಿತಿಯನ್ವಯ, ತ್ಯಾಗರಾಜನಗರದ 63 ವರ್ಷದ ಪುರುಷ ಹಾಗೂ 30 ವರ್ಷದ ಪುರುಷ ತೀವ್ರ ಉಸಿರಾಟದ ತೊಂದರೆಯಿಂದ ಸಾವನಪ್ಪಿದ್ದಾರೆ
ಪ್ರಸ್ತುತ ತಾಲೂಕಿನಲ್ಲಿ 2216 ಮಂದಿಗೆ ಸೋಂಕು ತಗುಲಿದ್ದು, 1519 ಮಂದಿ ಗುಣಮುಖರಾಗಿದ್ದರೆ 77 ಮಂದಿ ಸಾವನಪ್ಪಿದ್ದಾರೆ.
ಸೋಂಕಿಗೆ ಒಳಗಾದ 56 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದ 564 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

