ದೊಡ್ಡಬಳ್ಳಾಪುರ: ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತರಾದ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ವೇಳೆ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಕನ್ನಡ ನಾಡಿನೊಂದಿಗೆ ಹೊಂದಿದ್ದ ಭಾವನಾತ್ಮಕ ಸಂಬಂಧ ಹಾಗೂ ಕನ್ನಡ ಚಿತ್ರರಂಗಕ್ಕೆ ಅವರ ಸೇವೆಯನ್ನು ಸಂಘಟನೆಯ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ ಹಾಗೂ ಮತ್ತಿತರು ಸ್ಮರಿಸಿದರು.
ಶ್ರದ್ಧಾಂಜಲಿ ಸಭೆಯಲ್ಲಿ ತಾಲ್ಲೂಕು ಅಧ್ಯಕ್ಷ ಹಾಮಾಮ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಎಸ್ಎಲ್ಎಲ್ ವೇಣು, ಉಪಾಧ್ಯಕ್ಷ ಆನಂದ್ ಕುಮಾರ್, ಗೌರವ ಅಧ್ಯಕ್ಷ ಪು. ಮಹೇಶ್,ಕಾರ್ಯದರ್ಶಿ ಜೋಗಹಳ್ಳಿ ಅಮ್ಮು,ನಗರಾಧ್ಯಕ್ಷ ಶ್ರೀನಗರ ಬಶೀರ್, ಮುಕ್ಕನಹಳ್ಳಿ ರವಿ, ರಘುನಂದನ್, ನವೀನ್, ಯಶವಂತ್ ಮತ್ತಿತರಿದ್ದರು.

