ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಶನಿವಾರದ ಬುಲೆಟಿನ್ ಮಾಹಿತಿಯಂತೆ. ತಾಲೂಕಿನ 101 ಜನರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿಗೆ ಒಳಗಾಗಿ ಅಕಾಶ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಓರ್ವ ಮಹಿಳೆ ಸಾವನಪ್ಪಿದ್ದಾರೆ.
ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ, ಶನಿವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 68 ಪುರುಷರು ಹಾಗೂ 33 ಮಹಿಳೆಯರು ಸೇರಿ 101 ಜನರಿಗೆ ಸೋಂಕು ದೃಡಪಟ್ಟಿದೆ.
ಹರಿತಲೇಖನಿಗೆ ಆರೋಗ್ಯ ಇಲಾಖೆಯ ಮೂಲಗಳು ನೀಡಿರುವ ಮಾಹಿತಿ ಅನ್ವಯ. ಆಕಾಶ್ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀನಿವಾಸ ನಗರದ 58 ವರ್ಷದ ಮಹಿಳೆ ತೀವ್ರ ಉಸಿರಾಟದ ತೊಂದರೆಯಿಂದ ಸಾವನಪ್ಪಿದ್ದಾರೆ.
ಪ್ರಸ್ತುತ ತಾಲೂಕಿನಲ್ಲಿ 2399 ಮಂದಿಗೆ ಸೋಂಕು ತಗುಲಿದ್ದು, 1555 ಮಂದಿ ಗುಣಮುಖರಾಗಿದ್ದರೆ 82 ಮಂದಿ ಸಾವನಪ್ಪಿದ್ದಾರೆ.
ಸೋಂಕಿಗೆ ಒಳಗಾದ 56 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 706 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

