ಸೆ.28ರಂದು ದೊಡ್ಡಬಳ್ಳಾಪುರ ಬಂದ್ ಯಶಸ್ವಿಗೊಳಿಸಲು ಸಂಘಟನೆಗಳ ಮನವಿ

ದೊಡ್ಡಬಳ್ಳಾಪುರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿ ಮಾಡಲು ಹೊರಟಿರುವ ಎಪಿಎಂಸಿ ಕಾಯ್ದೆ,  ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ, ವಿದ್ಯುತ್ ಖಾಸಗೀಕರಣ, ಕಾರ್ಮಿಕ ಕಾಯ್ದೆ ತಿದ್ದುಪಡಿ ಜಾರಿ ಮಾಡುವ ಕ್ರಮವನ್ನು ವಿರೋಧಿಸಿ ಹಾಗೂ ಯಾವುದೇ ಕಾರಣಕ್ಕೂ ಮಸೂದೆಗಳು ಜಾರಿಯಾಗಬಾರದು ಎಂದು ಆಗ್ರಹಿಸಿ,  ರಾಜ್ಯದಲ್ಲಿ ರೈತ ಸಂಘಟನೆಗಳು ಕರೆ ನೀಡಿರುವ ಸೆ.28ರ ಬಂದ್‌ಗೆ ಬೆಂಬಲಿಸಿ ತಾಲೂಕಿನ ಕನ್ನಡಪರ ಸಂಘಟನೆಗಳು, ರೈತ, ಕಾರ್ಮಿಕ, ದಲಿತ ಸಂಘಟನೆಗಳ ಒಕ್ಕೂಟದಿಂದ ದೊಡ್ಡಬಳ್ಳಾಪುರ ಬಂದ್ ಆಚರಿಸಲು ಸಿದ್ದತೆಗಳನ್ನು ನಡೆಸಿದ್ದು, ಬಂದ್ ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.

ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ರಾಜ್ಯ ರೈತ ಸಂಘ, ಕನ್ನಡಪರ ಸಂಘಟನೆಗಳು, ದಲಿತ ಪರ ಸಂಘಟನೆ, ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಕನ್ನಡ ಪಕ್ಷದ ಅಧ್ಯಕ್ಷ ಸಂಜೀವ್ ನಾಯಕ್, ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ಸೆ.28ರಂದು ಸಂಪೂರ್ಣ ಬಂದ್ ಆಚರಿಸಲಾಗುತ್ತಿದ್ದು, ರೈತರು, ಕಾರ್ಮಿಕರು, ವರ್ತಕರು, ಉದ್ಯೋಗಸ್ಥರು, ನೇಕಾರರು ಮೊದಲಾಗಿ ಎಲ್ಲಾ ವರ್ಗದ ಜನರಿಗೆ ಸರ್ಕಾರದ ಜನ ವಿರೋಧಿ ನೀತಿಗಳ ಬಗ್ಗೆ ಅರಿವು ಮೂಡಿಸಿ, ಬಂದ್ ಯಶಸ್ವಿಗೊಳಿಸಲು ಮನವಿ ಮಾಡಲಾಗುವುದು. ಈ ಕುರಿತು ಆಟೋ ಪ್ರಚಾರ ಕೈಗೊಳ್ಳಲಾಗುವುದು ಎಂದರು.

ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಟಿ.ಎನ್‌ಪ್ರಭುದೇವ್ ಮಾತನಾಡಿ, ರೈತ ವಿರೋಧಿ ಕಾಯ್ದೆಗಳ ಜಾರಿ ಮೂಲಕ ರೈತರು ಕೃಷಿಯಿಂದ ತಾವಾಗಿಯೇ ವಿಮುಖರಾಗುವಂತೆ ಮಾಡಲಾಗುತ್ತಿದೆ. ವಿದ್ಯುತ್ ಕಂಪನಿಗಳನ್ನು ಸಂಪೂರ್ಣವಾಗಿ ಖಾಸಗಿ ಕಂಪನಿಗಳಿಗೆ ವಹಿಸುವ ಮೂಲಕ ಕೃಷಿಗೆ ಉಚಿತ ವಿದ್ಯುತ್ ಪೂರೈಕೆ ನಿಲ್ಲಿಸಲು ಸರ್ಕಾರ ಸಿದ್ದತೆಗಳನ್ನು ನಡೆಸಿದೆ. ಎಪಿಎಂಸಿ ನ್ಯೂನತೆಗಳನ್ನು ಸರಿಪಡಿಸಿ, ರೈತರ ಹಿತ ಕಾಯುವ ಬದಲು, ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕಾರ್ಪೋರೇಟ್ ಕಂಪನಿಗಳಿಗೆ ಲಾಭ ಮಾಡಿಕೊಡುವ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ, ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದರು.

ದೊಡ್ಡಬಳ್ಳಾಪುರದಲ್ಲಿ ಸೆ.28ರಂದು ಬಂದ್..!

ಸೆ.28ರಂದು ಎಲ್ಲಾ ವರ್ಗದ ಜನರು ಸಂಪೂರ್ಣವಾಗಿ ಬಂದ್‌ನಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು. ಅಂದು  ಬೆಳಿಗ್ಗೆ  7 ಗಂಟೆಯಿಂದ ಬೈಕ್ ರ್ಯಾಲಿ ಮಾಡುವ ಮೂಲಕ ಬಂದ್ ಆಚರಿಸಲು ಮನವಿ ಮಾಡಲಾಗುವುದು. ಆ ನಂತರ ನೆಲದಾಂಜನೇಯಸ್ವಾಮಿ ದೇವಾಲಯದ ಡಾ.ರಾಜ್‌ಕುಮಾರ್ ವೃತ್ತದ ಬಳಿಯಿಂದ ಪ್ರತಿಭಟನಾ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ಆಗಮಿಸಿ, ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ, ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಸತೀಶ್, ತಾಲೂಕು ಅಧ್ಯಕ್ಷ ಹನುಮೇಗೌಡ,ವಸಂತ್ ಕುಮಾರ್,  ಪ್ರಾಂತ ರೈತ ಸಂಘದ ತಾಲೂಕು ಕಾರ್‍ಯದರ್ಶಿ ರಾಮಕೃಷ್ಣ, ಮುಖಂಡ ವಿಜಯ ಕುಮಾರ್, ಸಿಐಟಿಯು ಮುಖಂಡ ರೇಣುಕಾರಾಧ್ಯ,ನಗರಸಭೆ ಮಾಜಿ ಸದಸ್ಯ ಕೆಂಪರಾಜ್, ರಾಜ್ಯ ರೈತ ತಾಲೂಕು ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ಶಿವರಾಜ್‌ಕುಮಾರ್ ಸೇನಾ ಸಮಿತಿಯ ಅಧ್ಯಕ್ಷ ರಮೇಶ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ರಾಜು ಸಣ್ಣಕ್ಕಿ, ಕರವೇ ತಾಲೂಕು ಗೌ.ಅಧ್ಯಕ್ಷ ಪು.ಮಹೇಶ್, ಅಗ್ನಿ ವೆಂಕಟೇಶ್, ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಚರಣ್ ರಾಜ್ ಮೊದಲಾದವರು ಭಾಗವಹಿಸಿದ್ದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]