ದೊಡ್ಡಬಳ್ಳಾಪುರ: ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಸೆ.28ರಂದ ನಿಗದಿಯಾಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ ತಿಳಿಸಿದ್ದಾರೆ.
ಈ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು, ಸೆಪ್ಟೆಂಬರ್ 28 ರಂದು ರೈತಸಂಘಗಳು ಮತ್ತು ಇತರೆ ಸಂಘಟನೆಗಳಿಂದ ರಾಜ್ಯವ್ಯಾಪ್ತಿ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ,ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ಥಾನಿ ಸಂಗೀತ ವಿಷಯದ ಪರೀಕ್ಷೆಯನ್ನು ಸೆ.29ಕ್ಕೆ ಮುಂದೂಡಲಾಗಿದೆ ಎಂದಿದ್ದಾರೆ.

