ದೊಡ್ಡಬಳ್ಳಾಪುರ: ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದ ಯುವತಿಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಹಾಗೂ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ, ಸಂವಿಧಾನ ರಕ್ಷಣೆಗಾಗಿ ನಾಗರಿಕರ ವೇದಿಕೆ ನೇತೃತ್ವದಲ್ಲಿ ನಗರದ ಸಿದ್ದಲಿಂಗಯ್ಯ ವೃತ್ತದ ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು, ರಾಜ್ಯ ಮತ್ತು ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಹ ಮತ್ತು ಅತ್ಯಾಚಾರಗಳು ಹೆಚ್ಚುತ್ತಿವೆ. ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ತೀರಾ ಹದಗೆಟ್ಟಿದೆ.ಅಲ್ಲಿ ನಡೆದ ಇತ್ತೀಚಿನ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ನೀಡಲು ಕಾನೂನು ಕ್ರಮ ಜರುಗಿಸಲು ಮುಖ್ಯಮಂತ್ರಿಗಳ ಬೇಜವಾಬ್ದಾರಿ ಎದ್ದು ಕಾಣುತ್ತಿದೆ. ಇಂತಹ ಮುಖ್ಯಮಂತ್ರಿ ರಾಜೀನಾಮೆ ನೀಡಲಿ ಅತ್ಯಾಚಾರಿಗಳಿಗೆ ಶೀಘ್ರವೇ ಗಲ್ಲು ಶಿಕ್ಷೆ ಆಗಲಿ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ದಲಿತ ವಿಮೋಚನಾ ಸೇನೆಯ ಮಾ.ಮುನಿರಾಜು, ಕಮ್ಯುನಿಸ್ಟ್ ಪಕ್ಷದ ಚಂದ್ರತೇಜಸ್ವಿ, ಕನ್ನಡ ಪಕ್ಷದ ಸಂಜೀವನಾಯ್ಕ, ಡಿ.ಪಿ.ಆಂಜನೇಯ, ಮಹಿಳಾ ಸಮಾಜದ ಅದ್ಯಕ್ಷೆ ಕೆ.ಎಸ್.ಪ್ರಭಾ, ಉಪಾದ್ಯಕ್ಷೆ ಕವಿತ, ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆಯ ಅಮಲಿ ಗೋಪಾಲ ನಾಯ್ಕ, ಪ್ರೊ.ಚಂದ್ರಪ್ಪ. ದಸಂಸ ಸಮಿತಿ ಜಿಲ್ಲಾ ಸಂಚಾಲಕ ರಾಜುಸಣ್ಣಕ್ಕಿ, ಪಿವಿಸಿ ಜಿಲ್ಲಾಧ್ಯಕ್ಷ ಗೂಳ್ಯಹನುಮಣ್ಣ, ದಲಿತ ಸಿಂಹ ಘರ್ಜನೆಯ ನಯಾಜ, ಅಂಬೇಡ್ಕರ್ ಸೇನೆಯ ನಂಜೇಶ್ ಮೊದಲಾದವರು ಭಾಗವಹಿಸಿದ್ದರು.

