ದೊಡ್ಡಬಳ್ಳಾಪುರ: ಕಾಂಗ್ರೆಸ್ ಪಕ್ಷದ ವತಿಯಿಂದ ನಗರದ ಕನ್ನಡ ಜಾಗೃತ ಭವನದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮ ನಡೆಯಿತು.
ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿ ಹಾಗೂ ದೇಶದ 2ನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಂತವರು ಯುಗ ಪುರುಷರಾಗಿದ್ದಾರೆ. ಇಡೀ ಜಗತ್ತೇ ಕೊಂಡಾಡುವ ಗಾಂಧಿ ಅಂತಹವರು ಈ ದೇಶದಲ್ಲಿ ಹುಟ್ಟಿರುವುದು ನಮ್ಮ ಹೆಮ್ಮೆ ಎಂದರು.
ಕೆಪಿಸಿಸಿ ಸದಸ್ಯರಾದ ಎಂ.ಜಿ.ಶ್ರೀನಿವಾಸ್,ಜಿ.ಲಕ್ಷ್ಮೀಪತಿ ಎಪಿಎಂಸಿ ಮಾಜಿ ಅಧ್ಯಕ್ಷ ತಿ.ರಂಗರಾಜು, ಕಾಂಗ್ರೆಸ್ ತಾಲೂಕು ಬ್ಲಾಕ್ ಅಧ್ಯಕ್ಷ ಬೈರೇಗೌಡ, ನಗರ ಘಟಕದ ಪ್ರಭಾರ ಅಧ್ಯಕ್ಷ ಅಂಜನಮೂರ್ತಿ, ತಾ.ಪಂ ಸದಸ್ಯ ರವಿ ಹಸನ್‌ಘಟ್ಟ, ಪ್ರಧಾನ ಕಾರ್ಯದರ್ಶಿ ಆದಿತ್ಯ ನಾಗೇಶ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇವತಿ ಅನಂತರಾಮ, ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ ಪ್ರಭಾವತಿ, ಎಸ್ಸಿ ಘಟಕದ ಅಧ್ಯಕ್ಷ ಮುನಿರಾಜ,ಎಸ್ಟಿ ಘಟಕದ ಅಧ್ಯಕ್ಷ ಭೀಮಣ್ಣ, ಮುಖಂಡರಾದ ಯೋಗ ನಟರಾಜ್, ಅಪ್ಪಿ ವೆಂಕಟೇಶ್, ಮೊದಲಾದವರು ಭಾಗವಹಿಸಿದ್ದರು.

