ದೊಡ್ಡಬಳ್ಳಾಪುರ: ಬಿಜೆಪಿ ನಗರದ ವಿವಿಧ ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಿಸಿ ಆದೇಶಿಸಲಾಗಿದೆ.
ಆದೇಶದಂತೆ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣಮೂರ್ತಿ.ಎಂ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಬಾಲಕೃಷ್ಣ, ಹಾಗೂ ಯುವ ಮೋರ್ಚಾ ನಗರ ಉಪಾಧ್ಯಕ್ಷರನ್ನಾಗಿ ಚಂದ್ರಶೇಖರ್ ಅವರನ್ನು ಆಯ್ಕೆ ಮಾಡಲಾಗಿದೆ.
ಆದೇಶ ಪತ್ರವನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್(ಗೋಪಿ)ವಿತರಿಸಿದರು. ಈ ಸಂಧರ್ಭದಲ್ಲಿ ಕೋಲಾರ ಜಿಲ್ಲಾ ಸಂಘಟನಾ ಸಹ ಪ್ರಭಾರಿ ಹಾಗೂ ಬೆಂ.ಗ್ರಾಂ.ಜಿಲ್ಲಾ ವಕ್ತಾರೆ ಪುಷ್ಪಾ ಶಿವಶಂಕರ್, ನಗರ ಬಿಜೆಪಿ ಅಧ್ಯಕ್ಷ ಹೆಚ್.ಎಸ್.ಶಿವಶಂಕರ್(ಶಂಕ್ರಿ), ತಾಲ್ಲೂಕು ಅಧ್ಯಕ್ಷ ಟಿ.ಎನ್.ನಾಗರಾಜ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್.ಮುನಿರಾಜ್, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ವತ್ಸಲಾ ಜಗನ್ನಾಥ್ ಮತ್ತಿತರಿದ್ದರು.

