ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯೋರ್ವರು ನಿರೂಪಕಿ ಅನುಶ್ರೀಗೆ ಡ್ರಗ್ಸ್ ಪ್ರಕರಣದಲ್ಲಿ ನೆರವಾಗಿದ್ದಾರೆ ಎಂದು ಕಪೋಕಲ್ಪಿತ ವರದಿ ನೀಡಿ ಜನರನ್ನು ದಿಕ್ಕು ತಪ್ಪಿಸುವ ಬದಲು, ಆ ಮಾಜಿ ಸಿಎಂ ಯಾರು ಎಂದು ಹೆಸರು ಬಹಿರಂಗ ಪಡಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರಸಾರ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಡ್ರಗ್ಸ್ ಕೇಸ್ ಪ್ರಕರಣ ಕುರಿತು ಇತ್ತೀಚೆಗೆ ಟಿವಿ ಆ್ಯಂಕರ್ ಅನುಶ್ರೀ ವಿಚಾರವಾಗಿ ಹಲವು ಲಿಂಕ್ ಗಳು ಶುರುವಾಗಿವೆ. ಸಿಸಿಬಿ ಪೊಲೀಸರು ನೋಟಿಸ್ ನೀಡಿದ ತಕ್ಷಣ ರಾಜ್ಯದ ಮಾಜಿ ಮುಖ್ಯಮಂತ್ರಿ ಮೂಲಕ ಒತ್ತಡ ಹೇರಲು ಆ ಹೆಣ್ಣು ಮಗಳು ಫೋನ್ ಮೂಲಕ ಚರ್ಚೆ ಮಾಡಿದ್ದಾರೆ. ಸಿಸಿಬಿ ಅಧಿಕಾರಿಗಳಿಗೆ ನಂಬರ್ ಸಿಕ್ಕಿದೆ ಅಂತೆ. ಅವರ ಕಾಲ್ ಲಿಸ್ಟ್‌ನಲ್ಲಿ ಮಾಜಿ ಮುಖ್ಯಮಂತ್ರಿ ನಂಬರ್ ನೋಡಿ ಸಿಸಿಬಿ ಪೊಲೀಸ್ ಶಾಕ್ ಆಗಿದ್ದಾರೆ ಎಂಬ ವರದಿಯನ್ನು ನಾನು ನೋಡಿದೆನೆ.
ರಾಜ್ಯದ ಮಾಜಿ ಮುಖ್ಯಮಂತ್ರಿಗಳಲ್ಲಿ ನಾನು, ಸಿದ್ದರಾಮಯ್ಯ, ಎಸ್.ಎಂ.ಕೃಷ್ಣ, ವೀರಪ್ಪಮೊಯ್ಲಿ, ಜಗದೀಶ್ ಶೆಟ್ಟರ್, ಡಿ.ವಿ.ಸದಾನಂದಗೌಡ ಇನ್ನೂ ಇದ್ದೇವೆ. ಯಾವ ಅಧಿಕಾರಿ ಮಾಜಿ ಸಿಎಂ ಅಂತ ಮಾಹಿತಿ ಕೊಟ್ಟಿದ್ದಾರೆ. ಯಾವ ಆಧಾರದ ಮೇರೆಗೆ ಮಾಜಿ ಮುಖ್ಯಮಂತ್ರಿ ಹೆಸರು ಪ್ರಸ್ತಾಪಕ್ಕೆ ಬಂದಿದೆ. ಯಾರು ಆ ಮಾಜಿ ಸಿಎಂ ಹೇಳಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಮಾಜಿ ಮುಖ್ಯಮಂತ್ರಿಗಳುಗೆ ಜವಬ್ದಾರಿ ಇದೆ ಎನ್ನುವುದು ಮಾಧ್ಯಮಗಳು ಅರಿತುಕೊಳ್ಳಬೇಕಿದೆ, ಆ ಹೆಣ್ಣು ಮಗಳು ಮಾಜಿ ಸಿಎಂ ಜೊತೆ ಮಾತಾಡಿದ್ದರೆ ಸತ್ಯ ಜನತೆಗೆ ಗೊತ್ತಾಗಲಿ. ಯಾರು ಆ ಮಾಜಿ ಸಿಎಂ ಅಂತ ಸಾರ್ವಜನಿಕವಾಗಿ ಮೊದಲು ಜನರ ಮುಂದೆ ಇಡಲಿ. ಆ ಮಾಜಿ ಸಿಎಂಗೆ ಶಿಕ್ಷೆ ಆಗಲಿ. ಯಾವ ಮಾಜಿ ಸಿಎಂ ಮಗನ ಹೆಸರು ಇದೆ ಗೊತ್ತಾಗಲಿ ಎಂದು ಪ್ರಸಾರ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

