ದೊಡ್ಡಬಳ್ಳಾಪುರ: ತಾಲ್ಲೂಕಿನ ಹೊನ್ನಾಘಟ್ಟ ಗ್ರಾಮದ ಕೆರೆ ಅಂಗಳದಲ್ಲಿ ಸುಮಾರು 25 ವರ್ಷದ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಡಿವೈಎಸ್ಪಿ ಟಿ.ರಂಗಪ್ಪ, ಮೃತ ದೇಹ ಸಾಕಷ್ಟು ಪ್ರಮಾಣದಲ್ಲಿ ಕೊಳೆತಿದೆ. ಮೃತ ದೇಹದ ಮೇಲಿನ ಬಟ್ಟೆ, ಮುಖ ಚಹರೆ ಹಾಗೂ ಇನ್ನಿತರೆ ಮಾಹಿತಿಗಳನ್ನು ಆಧರಿಸಿ ಈಗಾಗಲೇ ತನಿಖೆ ಆರಂಭಿಸಲಾಗಿದೆ.
ಯುವಕನ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪ್ರಯತ್ನ ಮುಂದುವರಿದಿದೆ.
ಡಿವೈಎಸ್ಪಿ ಟಿ.ರಂಗಪ್ಪ ನೇತೃತ್ವದಲ್ಲಿ ಸಿಪಿಐ ನವೀನ್ ಕುಮಾರ್ & ತಂಡ ರಚಿಸಲಾಗಿದೆ. ಘಟನೆ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.
ಮೃತ ವ್ಯಕ್ತಿಯ ಸಂಬಂಧಿಕರು ಯಾರಾದರೂ ಇದ್ದಲ್ಲಿ ದೊಡ್ಡಬಳ್ಳಾಪುರ ಸರ್ಕಲ್ ಇನ್ಸ್ಪೆಕ್ಟರ್ ಅವರನ್ನು ಸಂಪರ್ಕಿಸಲು ಕೋರಿದೆ
ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ: 9480802437.9480802453.

