ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಅಕ್ಟೋಬರ್ 9 ರಂದು) 178 ಪುರುಷರು ಹಾಗೂ 64 ಮಹಿಳೆಯರು ಸೇರಿದಂತೆ 242 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಬುಲೆಟಿನ್ ವರದಿ ತಿಳಿಸಿದೆ.
ವರದಿ ಅನ್ವಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 50 ಪುರುಷರು ಮತ್ತು 15 ಮಹಿಳೆಯರು, ನೆಲಮಂಗಲ ತಾಲ್ಲೂಕಿನಲ್ಲಿ 39 ಪುರುಷರು ಮತ್ತು 18 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 50 ಪುರುಷರು ಮತ್ತು 19 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 38 ಪುರುಷರು ಮತ್ತು 12 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 1 ಪುರುಷ ಕೋವಿಡ್ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
*ಎರಡು ಸಾವು*
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 65 ವರ್ಷದ ಪುರುಷ ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ 55 ವರ್ಷದ ಪುರುಷರೊಬ್ಬರು ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ.

