ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಪಾಲನೆಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚನೆ

ದೊಡ್ಡಬಳ್ಳಾಪುರ: ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಎಲ್ಲಾ ಅಧಿಕಾರಿಗಳು ಗಂಭೀರತೆಯನ್ನು ಅರಿತು ಕಟ್ಟೆಚ್ಚರವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾ ಸಂಬಂಧ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ಕಾರಣಕ್ಕೂ ವಿಧಾನ ಪರಿಷತ್ತ  ಚುನಾವಣೆಯನ್ನು ಅಧಿಕಾರಿಗಳು ಲಘುವಾಗಿ ಪರಿಗಣಿಸಬಾರದು. ವಿಧಾನಸಭಾ ಹಾಗೂ ಲೋಕಸಭಾ‌ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಂತೆ, ಈ ಚುನಾವಣೆಯನ್ನೂ ಅಷ್ಟೇ ಗಂಭೀರವೆಂದು ಪರಿಗಣಿಸಬೇಕು. ಸೆಪ್ಟೆಂಬರ್ 29 ರಿಂದಲೇ ಮಾದರಿ ನೀತಿ ಸಂಹಿತೆ ಜಿಲ್ಲಾ ವ್ಯಾಪ್ತಿಯಲ್ಲಿ ಜಾರಿಯಲ್ಲಿದ್ದು, ನವೆಂಬರ್ 05ರ ವರೆಗೆ ಜಾರಿಯಲ್ಲಿರುತ್ತದೆ. ಸುಗಮ ಹಾಗೂ ಶಾಂತಿಯುತ ಚುನಾವಣೆ ಮತ್ತು ಕೋವಿಡ್ ನಿಯಮಗಳ ಪಾಲನೆ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಮತದಾನವು ಅಕ್ಟೋಬರ್ 28ರಂದು ನಡೆಯಲಿದ್ದು, ಮತ ಎಣಿಕೆ ನವೆಂಬರ್ 02 ರಂದು ನಡೆಯಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 17 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ನೆಲಮಂಗಲ ತಾಲ್ಲೂಕಿನಲ್ಲಿ 03, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 05, ಹೊಸಕೋಟೆ ತಾಲ್ಲೂಕಿನಲ್ಲಿ 05 ಹಾಗೂ ದೇವನಹಳ್ಳಿ ತಾಲ್ಲೂಕಿನಲ್ಲಿ 04 ಮತಗಟ್ಟೆ ಸ್ಥಾಪಿಸಲಾಗಿದೆ. ಎಲ್ಲಾ ಮತದಾನ ಕೇಂದ್ರಗಳಲ್ಲಿ ಅವಶ್ಯ ಮೂಲಭೂತ ಸೌಲಭ್ಯಗಳು ಲಭ್ಯವಿರುವ ಬಗ್ಗೆ ಸಂಬಂಧಪಟ್ಟ ಎಲ್ಲಾ ತಹಶೀಲ್ದಾರ್‌ಗಳು ಭೇಟಿ ನೀಡಿ ವರದಿ ನೀಡಬೇಕು ಎಂದು ತಿಳಿಸಿದರು.

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಚುನಾವಣಾ ಸಭೆ ಮತ್ತು ಸಮಾರಂಭಗಳಿಗೆ ಅನುಮತಿ ಕೋರಿ ಅರ್ಜಿಯನ್ನು ಮುಂಚಿತವಾಗಿ ನೀಡಬೇಕು. ಚುನಾವಣಾ ಸಭೆ ಮತ್ತು ಸಮಾರಂಭಗಳಿಗೆ ಜಿಲ್ಲಾಧಿಕಾರಿಗಳು ಅನುಮತಿ ನೀಡಲಿದ್ದು, ಚುನಾವಣಾ ಪ್ರಚಾರಕ್ಕೆ ಬಳಸುವ ವಾಹನಗಳಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ನೀಡಲಿದ್ದಾರೆ. ಚುನಾವಣಾ ಮಾದರಿ ನೀತಿ ಸಂಹಿತೆ, ಕೋವಿಡ್ ನಿಯಮಗಳ ಪಾಲನೆ ಹಾಗೂ ಚುನಾವಣಾ ದೂರು ಸ್ವೀಕಾರಕ್ಕೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಫ್ಲೈಯಿಂಗ್ ಸ್ಕ್ವಾಡ್, ವಿಡಿಯೋ ವಿಕ್ಷಕರ ತಂಡ, ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಗೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದ ಮಸ್ಟರಿಂಗ್ ಹಾಗೂ ಡಿ-ಮಸ್ಟರಿಂಗ್ ಕಾರ್ಯ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆಯಲಿದ್ದು,ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಮತದಾನ ಕೇಂದ್ರಗಳಿಗೆ ಕಳುಹಿಸಲು ಹಾಗೂ ಡಿ-ಮಸ್ಟರಿಂಗ್ ಕೇದ್ರಕ್ಕೆ ಕರೆತರಲು ವಾಹನಗಳ ಅವಶ್ಯಕತೆಯಿದ್ದು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿಲಭ್ಯವಿರುವ ವಾಹನಗಳನ್ನು ಕಾರ್ಯಕ್ಕೆ ನಿಯೋಜಿಸಿಕೊಳ್ಳಬೇಕು ಎಂದು ತಿಳಿಸಿದರು.

ಮತಗಟ್ಟೆ ಕಾರ್ಯಕ್ಕೆ ನಿಯೋಜಿಸಬೇಕಾಗುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಅಕ್ಟೋಬರ್ 16, 20 ಹಾಗೂ 27ರಂದು ತರಬೇತಿ ಆಯೋಜಿಸಲಾಗಿದ್ದು, ಅವಶ್ಯ ಎಣಿಕೆ ಅಧಿಕಾರಿ ಮತ್ತು ಸಿಬ್ಬಂದಿ ನೇಮಕಾತಿ ಹಾಗೂ ತರಬೇತಿ ಬಗ್ಗೆ ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿಗಳು ಕ್ರಮವಹಿಸಲಿದ್ದಾರೆ ಎಂದು ತಿಳಿಸಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಕೋವಿಡ್ ಮಾರ್ಗಸೂಚಿ ಅನುಸಾರ ಮತಗಟ್ಟೆಗಳಲ್ಲಿ ಮತದಾನ ಕಾರ್ಯಕ್ಕೂ ಸೂಕ್ತ ಸುರಕ್ಷತಾ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಂ.ಎನ್.ನಾಗರಾಜ, ಅಪರ ಜಿಲ್ಲಾಧಿಕಾರಿ ಡಾ||ಜಗದೀಶ್.ಕೆ.ನಾಯಕ್, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]