ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಅಕ್ಟೋಬರ್ 11 ರಂದು) 111 ಪುರುಷರು ಹಾಗೂ 44 ಮಹಿಳೆಯರು ಸೇರಿದಂತೆ 155 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ವರದಿ ತಿಳಿಸಿದೆ.
ವರದಿಯ ಅನ್ವಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 35 ಪುರುಷರು ಮತ್ತು 13 ಮಹಿಳೆಯರು, ನೆಲಮಂಗಲ ತಾಲ್ಲೂಕಿನಲ್ಲಿ 24 ಪುರುಷರು ಮತ್ತು 10 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 27 ಪುರುಷರು ಮತ್ತು 11 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 21 ಪುರುಷರು ಮತ್ತು 9 ಮಹಿಳೆಯರಾಗಿದ್ದಾರೆ.
ಅಲ್ಲದೆ ಬೆಂಗಳೂರು ನಗರ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 4 ಪುರುಷರು ಹಾಗೂ ಓರ್ವ ಮಹಿಳೆಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

