ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಅಕ್ಟೋಬರ್ 12 ರಂದು) 87 ಪುರುಷರು ಹಾಗೂ 26 ಮಹಿಳೆಯರು ಸೇರಿದಂತೆ 113 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ವರದಿ ತಿಳಿಸಿದೆ.
ವರದಿಯಂತೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 35 ಪುರುಷರು ಮತ್ತು 8 ಮಹಿಳೆಯರು, ನೆಲಮಂಗಲ ತಾಲ್ಲೂಕಿನಲ್ಲಿ 13 ಪುರುಷರು ಮತ್ತು 6 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 29 ಪುರುಷರು ಮತ್ತು 7 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 6 ಪುರುಷರು ಮತ್ತು 3 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 4 ಪುರುಷರು ಹಾಗೂ 2 ಮಹಿಳೆಯರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

