ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 34 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 220 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ, ಸೋಮವಾರದ ಸಂಜೆಯವರಗೆ, ದೊಡ್ಡಬಳ್ಳಾಪುರ ತಾಲೂಕಿನ 31 ಪುರುಷರು ಹಾಗೂ 12 ಮಹಿಳೆಯರು ಸೇರಿ, 43 ಜನರಿಗೆ ಸೋಂಕು ದೃಢಪಟ್ಟಿದೆ.
ಪ್ರಸ್ತುತ ತಾಲೂಕಿನಲ್ಲಿ 3517 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 2901 ಮಂದಿ ಗುಣಮುಖರಾಗಿ ಮನೆಗೆ ಮರಳಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 616ಕ್ಕೆ ಇಳಿದಿದೆ.
ಉಳಿದಂತೆ ಸೋಂಕಿಗೆ ಒಳಗಾದ 56 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 560 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

