ಶಾರ್ಜಾ: ಕೆಕೆಆರ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ.
ಕೆಕೆಆರ್ ವಿರುದ್ದ ನಡೆದ ಪಂದ್ಯದಲ್ಲಿ ಬ್ಯಾಟಿಂಗ್ನಲ್ಲಿ ಅಬ್ಬರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ನಲ್ಲೂ ಮಿಂಚಿನ ದಾಳಿ ಸಂಘಟಿಸಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸಿದೆ.
ಎಬಿಡಿಯ 73(33) ಅಬ್ಬರದ ಬ್ಯಾಟಿಂಗ್ ನೆರವಿನಿಂದ ಕೋಲ್ಕತಾ ನೈಟ್ ರೈಡರ್ಸ್ಗೆ 195 ರನ್ ಟಾರ್ಗೆಟ್ ನೀಡಿದ ಆರ್ ಸಿಬಿ. ಕೇವಲ 112 ರನ್ಗಳಿಗೆ ಕೆಕೆಆರ್ ತಂಡವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು.
ಕೆಕೆಆರ್ ತಂಡ 9 ವಿಕೆಟ್ ನಷ್ಟಕ್ಕೆ 112ರನ್ ಸಿಡಿಸಿ ಸೋಲೊಪ್ಪಿಕೊಂಡಿತು. ಆರ್ಸಿಬಿ 82 ರನ್ ಗೆಲುವು ದಾಖಲಿಸಿತು. ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿತು.

