ಗಂಗಾವತಿಗೆ ನೂತನ ಕೃಷಿ ಮಹಾವಿದ್ಯಾಲಯ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ ನೂತನ ಕೃಷಿ ಮಹಾವಿದ್ಯಾಲಯ ಸ್ಥಾಪಿಸುವಂತೆ ಕೊಪ್ಪಳ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್  ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದರು.

ಗಂಗಾವತಿ ನೀರಾವರಿ ಮತ್ತು ಒಣಭೂಮಿ ಹೊಂದಿರುವ ಪ್ರದೇಶವಾಗಿದ್ದು, ಇಲ್ಲಿನ ಮಣ್ಣು ಮತ್ತು ನೀರು ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಸೂಕ್ತವಾಗಿದೆ. ಅಲ್ಲದೇ ಜಿಲ್ಲೆಯಯ ಕೃಷಿ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದೆ.ಜಿಲ್ಲೆಯಲ್ಲಿ ಎರಡು ಕೃಷಿ ಸಂಶೋಧನಾ ಕೇಂದ್ರಗಳು, ಒಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ಒಂದು ಕೃಷಿ ವಿಜ್ಞಾನ ಕೇಂದ್ರವಿದ್ದು, ಒಟ್ಟು 19 ವಿಜ್ಞಾನಿಗಳು ಮತ್ತು 20 ಶಿಕ್ಷಕೇತರ ಸಿಬ್ಬಂದಿಗಳಿದ್ದು, ಕೃಷಿ ಮಹಾವಿದ್ಯಾಲಯ ಸ್ಥಾಪನೆಗೆ ಬೇಕಾದ ಎಲ್ಲಾ ರೀತಿಯ ಅನುಕೂಲವನ್ನು ಹೊಂದಿರುತ್ತದೆ.  

ಕೃಷಿಗೆ ಪೂರಕವಾದ ವಾತಾವರಣವನ್ನು ಹೊಂದಿರುವ ಜಿಲ್ಲೆಯಲ್ಲಿ ಕೃಷಿ ಮಹಾವಿದ್ಯಾಲಯದ ಅಗತ್ಯವಿರುತ್ತದೆ. ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳು ಕೃಷಿ ಪದವಿ ಹೊಂದಲು 140 ಕಿ.ಮೀ. ದೂರದ ರಾಯಚೂರಿಗೆ ಇಲ್ಲವೇ 220 ಕಿ.ಮೀ ದೂರದಲ್ಲಿರುವ ಧಾರವಾಡಕ್ಕೆ ಹೋಗಬೇಕಾದ ಅನಿವಾರ್ಯತೆಯಿದೆ. ಇದರಿಂದ ಕೃಷಿ ಪದವಿ ತಂತ್ರಜ್ಞಾನ ಸಂಬಂಧ ಅಧ್ಯಯನಕ್ಕೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ಕೊಪ್ಪಳದಲ್ಲಿಯೇ ಕೃಷಿ ಮಹಾವಿದ್ಯಾಲಯ ಸ್ಥಾಪಿಸುವುದರಿಂದ ಅನುಕೂಲವಾಗಲಿದೆ ಎಂದು ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾಗಿದೆ.

ಗಂಗಾವತಿ ಕೃಷಿ ಸಂಶೋಧನಾ ಕೇಂದ್ರದಲ್ಲಿ ಕೃಷಿ ಮಹಾವಿದ್ಯಾಲಯ ಸ್ಥಾಪಿಸಲು ಬೇಕಾದ ಭೂಪ್ರದೇಶ ಹಾಗೂ ನೀರಾವರಿ ಸೌಲಭ್ಯವಿರುತ್ತದೆ. ನೂತನ ಕೃಷಿ ಮಹಾವಿದ್ಯಾಲಯಕ್ಕೆ ಅಗತ್ಯವಾದ ಪ್ರಯೋಗಾಲಯಗಳು, ವಸತಿ ನಿಲಯ, ವಡ್ಡರಹಳ್ಳಿ ಕ್ಯಾಂಪ್ ಡಿಎಟಿಸಿಯಲ್ಲಿ ಲಭ್ಯವಿದ್ದು, ಇವುಗಳನ್ನು ನೂತನ ಕೃಷಿ ಮಹಾವಿದ್ಯಾಲಯಕ್ಕೆ ಅವಶ್ಯಕತೆಯಿದ್ದಲ್ಲಿ ಬಳಸಿಕೊಳ್ಳಬಹುದಾಗಿದೆ. ಅಲ್ಲದೇ ಗಂಗಾವತಿ ನಗರವು ವಿವಿಧ ನಗರಗಳಿಗೆ ಸಂಪರ್ಕ ಕಲ್ಪಿಸಲು ಸುಸಜ್ಜಿತ ರೈಲು ಹಾಗೂ ಸಾರಿಗೆ ಸಂಪರ್ಕವನ್ನೂ ಸಹ ಹೊಂದಿದೆ. ಇಲ್ಲಿ ಕೃಷಿ ಮಹಾವಿದ್ಯಾಲಯ ಸ್ಥಾಪಿಸುವುದರಿಂದ ಜಿಲ್ಲೆಯ ವಿದ್ಯಾರ್ಥಿ ಹಾಗೂ ರೈತ ಸಮುದಾಯಕ್ಕೆ ಅನುಕೂಲವಾಗಲಿದೆ ಎಂದು ಬಿ.ಸಿ.ಪಾಟೀಲರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಪ್ರಸ್ತಾವನೆ ಸಲ್ಲಿಕೆಗೂ ಮುನ್ನ ವಿಕಾಸಸೌಧದ ಕೃಷಿ ಸಚಿವರ ಕಚೇರಿಯಲ್ಲಿ ಕೃಷಿ ಮಹಾವಿದ್ಯಾಲಯ ಸ್ಥಾಪನೆ ಸಂಬಂಧ ಸಭೆ ನಡೆಯಿತು. ಸಭೆಯಲ್ಲಿ ಕೊಪ್ಪಳ ಸಂಸದ   ಸಂಗಣ್ಣ ಕರಡಿ ಶಾಸಕರಾದ  ಹಾಲಪ್ಪ ಆಚಾರ್,ಬಸವರಾಜ್ ದಡೆಸಗೂರ್,ಪರಣ್ಣ ಮನವಳಿ ಉಪಸ್ಥಿತರಿದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]