ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಅಕ್ಟೋಬರ್ 16 ರಂದು) 231 ಪುರುಷರು ಹಾಗೂ 114 ಮಹಿಳೆಯರು ಸೇರಿದಂತೆ 345 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬುಲೆಟಿನ್ ವರದಿ ತಿಳಿಸಿದೆ.
ವರದಿಯನ್ವಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 62 ಪುರುಷರು ಮತ್ತು 31 ಮಹಿಳೆಯರು, ನೆಲಮಂಗಲ ತಾಲ್ಲೂಕಿನಲ್ಲಿ 65 ಪುರುಷರು ಮತ್ತು 42 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 26 ಪುರುಷರು ಮತ್ತು 10 ಮಹಿಳೆಯರು.
ದೇವನಹಳ್ಳಿ ತಾಲ್ಲೂಕಿನಲ್ಲಿ 72 ಪುರುಷರು ಮತ್ತು 29 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 6 ಪುರುಷರು ಹಾಗೂ 2 ಮಹಿಳೆಯರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.