ದೊಡ್ಡಬಳ್ಳಾಪುರ: ಹಣ ಸುಲಿಗೆ, ಜೀವಬೆದರಿಕೆ, ಕೊಲೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಬಾಗೇಪಲ್ಲಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಬಾಂಬೆಸಲೀಂ ಎಂಬಾತನನ್ನು ಹೆಚ್ಚಿನ ವಿಚಾರಣೆಗಾಗಿ ದೊಡ್ಡಬಳ್ಳಾಪುರ ಪೊಲೀಸ್ ವಶಕ್ಕೆ ಪಡೆಯಲಾಗಿದೆ ಎಂದು ಡಿವೈಎಸ್ಪಿ ಟಿ.ರಂಗಪ್ಪ ತಿಳಿಸಿದ್ದಾರೆ.
ಅವರು ಈ ಬಗ್ಗೆ ಮಾಹಿತಿ ನೀಡಿ, ಬಾಂಬೆಸಲೀಂ ಮೇಲೆ ದೊಡ್ಡಬಳ್ಳಾಪುರ ಉಪವಿಭಾಗದ ವಿವಿಧ ಠಾಣೆಗಳಲ್ಲು ಈ ಹಿಂದೆ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಬಾಂಬೆಸಲೀಂ ನಿಂದ ವಂಚನೆ, ಹಣ ಸುಲಿಗೆ ಅಥವಾ ಜೀವ ಬೆದರಿಕೆಗೆ ಒಳಗಾದ ಸಾರ್ವಜನಿಕರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರೆ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಮೊ: 9480802421 ಸಂಪರ್ಕಿಸಬಹುದಾಗಿದೆ.