ಮತಗಟ್ಟೆ ಅಧಿಕಾರಿಗಳು ಪಿಪಿಇ ಕಿಟ್ ಧರಿಸಿ ಚುನಾವಣೆ ಕಾರ್ಯ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ: ಮತದಾರರ ಸಂಖ್ಯೆ ಹಾಗೂ ಮತಗಟ್ಟೆ ಸಂಖ್ಯೆ ಕಡಿಮೆಯಿದ್ದರೂ, ಮತದಾನ ಪ್ರಕ್ರಿಯೆ ಕಾರ್ಯ ಪ್ರಮುಖವಾಗಿರುವ ಹಿನ್ನೆಲೆ ಮತಗಟ್ಟೆ ಅಧಿಕಾರಿಗಳು ಅತ್ಯಂತ ಎಚ್ಚರಿಕೆಯಿಂದ ಹಾಗೂ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾ ಸಂಬಂಧ  ಮತಗಟ್ಟೆ ಅಧಿಕಾರಿಗಳ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಕ್ಟೋಬರ್ 28 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ರವರೆಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಮತಗಟ್ಟೆಗೆ ನಿಯೋಜನೆಯಾಗುವ ಅಧಿಕಾರಿಗಳು ಚುನಾವಣಾ ಆಯೋಗದಿಂದ ಅಧಿಕೃತವಾಗಿ ಸೂಚಿಸಿರುವ ಗುರುತಿನ ಚೀಟಿಗಳ ಬಗ್ಗೆ ಎಚ್ಚರವಹಿಸಬೇಕು ಎಂದರಲ್ಲದೆ, ಮತದಾನದ ಗೌಪ್ಯತೆ ಕಾಪಾಡುವುದು ಪ್ರತಿಯೊಬ್ಬರ ಮಹತ್ತರವಾದ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 17 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ನೆಲಮಂಗಲ ತಾಲ್ಲೂಕಿನಲ್ಲಿ 3, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 5, ಹೊಸಕೋಟೆ ತಾಲ್ಲೂಕಿನಲ್ಲಿ 5 ಹಾಗೂ ದೇವನಹಳ್ಳಿ ತಾಲ್ಲೂಕಿನಲ್ಲಿ 4 ಮತಗಟ್ಟೆ ಸ್ಥಾಪಿಸಲಾಗಿದೆ. ಎಲ್ಲಾ ಮತದಾನ ಕೇಂದ್ರಗಳಲ್ಲಿ ಅವಶ್ಯ ಮೂಲಭೂತ ಸೌಲಭ್ಯಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದ ಮಸ್ಟರಿಂಗ್ ಹಾಗೂ ಡಿ-ಮಸ್ಟರಿಂಗ್ ಕಾರ್ಯ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆಯಲಿದ್ದು, ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಮತದಾನ ಕೇಂದ್ರಗಳಿಗೆ ಕಳುಹಿಸಲು ಹಾಗೂ ಡಿ-ಮಸ್ಟರಿಂಗ್ ಕೇಂದ್ರಕ್ಕೆ ಕರೆತರಲು ವಾಹನಗಳ ಅವಶ್ಯವಿರುವ ಹಿನ್ನೆಲೆ ವಾಹನಗಳನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.

ಮತಗಟ್ಟೆ ಕಾರ್ಯಕ್ಕೆ ನಿಯೋಜಿಸಬೇಕಾಗುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಇಂದು ಮೊದಲ ಹಂತದ ತರಬೇತಿ ನೀಡಲಾಗಿದ್ದು, ಅಕ್ಟೋಬರ್ 20 ಹಾಗೂ 27ರಂದು ಎರಡು ಹಾಗೂ ಮೂರನೇ ಹಂತದ ತರಬೇತಿ ಆಯೋಜಿಸಲಾಗುವುದು  ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಮಾಹಿತಿ ನೀಡಿದರು.

ಕರೊನಾ ವೈರಾಣು ಸೋಂಕು ಭೀತಿ ಹಿನ್ನಲೆಯಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಮತಗಟ್ಟೆ ಅಧಿಕಾರಿಗಳು ಪಿಪಿಇ ಕಿಟ್ ಧರಿಸಿ ಕಾರ್ಯ ನಿರ್ವಹಿಸಬೇಕು ಎಂದರಲ್ಲದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳವುದರೊಂದಿಗೆ ಸ್ಯಾನಿಟೈಸರ್ ಬಳಕೆ ಕಡ್ಡಾಯವೆಂದು ತಿಳಿಸಿದರು.

ಪ್ರತಿಯೊಂದು ಮತಗಟ್ಟೆಗೂ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಿ, ಮತಗಟ್ಟೆಗೆ ಬರುವ ಮತದಾರರ ಥರ್ಮಲ್ ಸ್ಕ್ರೀನಿಂಗ್ ನಡೆಸಿ ಮತದಾನ ಪ್ರಕ್ರಿಯೆಗೆ ಅವಕಾಶ ಮಾಡಿ ಕೊಡಲಾಗುವುದು ಎಂದರು ಹೇಳಿದರು.

ತರಬೇತಿ ಕಾರ್ಯಕ್ರಮದಲ್ಲಿ ಮಾಸ್ಟರ್ ಟ್ರೈನರ್‍ಗಳಾದ ಡಿ.ಎನ್.ಬಾಬು ಹಾಗೂ ಕೆಂಪೇಗೌಡ, ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!