ದೊಡ್ಡಬಳ್ಳಾಪುರ: ಪಿಎಸ್‌ಐ ಜಗದೀಶ್ 5ನೇ ವರ್ಷದ ಹುತಾತ್ಮ ದಿನಾಚರಣೆ

ದೊಡ್ಡಬಳ್ಳಾಪುರ: ಹುತಾತ್ಮ ಪಿಎಸ್‌ಐ ಜಗದೀಶ್ ಅವರ 5ನೇ ವರ್ಷದ ಹುತಾತ್ಮ ದಿನಾಚರಣೆಯನ್ನು ನಗರದ ಡಿ.ಕ್ರಾಸ್ ಬಳಿ ಇರುವ ಪಿಎಸ್‌ಐ ಜಗದೀಶ್ ವೃತ್ತದಲ್ಲಿ ಶುಕ್ರವಾರ ಅವರ ಅಭಿಮಾನಿ ಬಳಗದವತಿಯಿಂದ ನಡೆಸಲಾಯಿತು.

ಈ ವೇಳೆ ಪುಷ್ಪ ನಮನ ಸಲ್ಲಿಸಿ ಡಿವೈಎಸ್‌ಪಿ ಟಿ.ರಂಗಪ್ಪಮಾತನಾಡಿ, ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪಿಎಸ್‌ಐ ಜಗದೀಶ್ ಅವರ ಕರ್ತವ್ಯ ಹಾಗು ಜನರ ಮೇಲಿನ ಪ್ರೀತಿಯ ನೆನಪಿನಲ್ಲಿ ಇಂದು ಕಾರ್ಯಕ್ರಮ ಮಾಡುತ್ತಿರುವುದು ತುಂಬಾ ಸಂತೋಷದ ಸಂಗತಿ. ಒಬ್ಬ ನಿಷ್ಟಾವಂತ ಸಾಮಾನ್ಯ ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ವೃತ್ತವನ್ನು ನಿರ್ಮಾಣ ಮಾಡಿರುವುದು ಅವರ ಕರ್ತವ್ಯ ನಿಷ್ಟೆಗೆ ಹಿಡಿದ ಕೈಗನ್ನಡಿಯಾಗಿದೆ. ಅಲ್ಲದೆ ಅವರು ತಾಲೂಕಿನಲ್ಲಿ ಗಳಿಸಿರುವ ಪ್ರೀತಿ ಜನರ ಬಾವನಾತ್ಮಕ ಸಂಬಂಧಗಳ ಜೊತೆ ಅವರ ಪ್ರಾಮಾಣಿಕ ಕೆಲಸವನ್ನು ಇಂದಿಗೂ ಸ್ಮರಿಸುತ್ತಿರುವ ನಿಮಗೆ ಇಲಾಖೆವತಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತಾ, ಮತ್ತೆ ಇಂತಹ ದುರಂತಗಳು ಮರುಕಳಿಸದಂತೆ ನೋಡಿಕೊಂಡು ಸಮಾಜದಲ್ಲಿರುವ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲು ನಾವು ಕಂಕಣ ಬದ್ದರಾಗಿದ್ದೇವೆ. ನಾಗರೀಕರು ಸಹಕಾರ ಜತೆಗೆ ಮಾಹಿತಿ ನೀಡಬೇಕಾಗಿದೆ ಎಂದರು.

ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ ಮಾತನಾಡಿ, ಸಮಾಜಕ್ಕಾಗಿ ದುಡಿದವರ, ಮಡಿದವರನ್ನು ಸಮಾಜ ಎಂದು ಮರೆಯುವುದಿಲ್ಲ ಎಂಬುದಕ್ಕೆ ಕಳೆದ ಐದು ವರ್ಷಗಳಿಂದ ತಾಲೂಕಿನ ಜನತೆ ನಡೆಸುತ್ತಾ ಬಂದಿರುವ ಈ ಕಾರ್ಯಕ್ರಮ ಸಾಕ್ಷಿಯಾಗಿ. ಜಗದೀಶ್ ಅವರ ಸವಿನೆನಪಿಗಾಗಿ ನಗರದ ಡಿ.ಕ್ರಾಸ್ ಬಳಿ ಇರುವ ರೈಲ್ವೆ ಮೆಲ್ಸೆತುವೆ ವೃತ್ತವನ್ನು ಪಿಎಸ್‌ಐ ಜಗದೀಶ್‌ವೃತ್ತ ಎಂದು ನಾಮಕರಣ ಮಾಡಿ, ಪ್ರತಿ ವರ್ಷ ಅವರ ಜನ್ಮ ದಿನ ಹಾಗು ಹುತಾತ್ಮ ದಿನಾಚರಣೆಯನ್ನು ಅವರ ಅಭಿಮಾನಿಗಳು, ನಾಗರೀಕರೆಲ್ಲಾ ಸೇರಿ ಕಳೆದ ಐದು ವರ್ಷಗಳಿಂದ ಆಚರಿಸಿಕೊಂಡು ಬಂದಿರುವುದು ನೋಡಬಹುದು. 

ಕಾರ್ಯಕ್ರಮದ ಅಂಗವಾಗಿ ಕರೊನಾ ಸೋಂಕು ನಿರ್ವಹಣೆಗೆ ಶ್ರಮಿಸುತ್ತಿರುವ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಎ ಎಸ್ ಐ ವರಲಕ್ಷ್ಮಿ, ಆಶಾ ಕಾರ್ಯಕರ್ತೆಯರಾದ ಸೋಚನಾ, ಶಶಿಕಲಾ, ಪೊಲೀಸ್ ಸಿಬ್ಬಂದಿಗಳಾದ ಬೆಟ್ಟಸ್ವಾಮಿಗೌಡ, ಶಿವಾನಂದ. ಕಾವ್ಯ, ಸುನೀಲ್ ಬಾಸಗಿ, ಪಾಂಡುರಂಗರನ್ನು ಸನ್ಮಾನಿಸಲಾಯಿತು.

ಈ ವೇಳೆ ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಕುಮಾರ್, ಸಬ್ ಇನ್ಸ್ ಪೆಕ್ಟರ್ ಸೋಮಶೇಖರ್, ಶಂಕರಪ್ಪ, ದಿವಂಗತ ಜಗದೀಶ್ ತಾಯಿ ಕಮಲಮ್ಮ, ಮಡದಿ ರಮ್ಯ, ನಗರಸಭೆ ಸ್ಥಾಯಿಸಮಿತಿ ಮಾಜಿ  ಅಧ್ಯಕ್ಷ ರೈಲ್ವೆಸ್ಟೇಷನ್ ಮಲ್ಲೇಶ್, ಕನ್ನಡ ಪಕ್ಷದ ವಿ.ಪರಮೇಶ್, ಮುಖಂಡರಾದ ಧುನಿಯಾ ಚಂದ್ರು. ಕರವೆ ಪ್ರವೀಣ್ ಶೆಟ್ಟಿ ಬಣದ ಹಮಾಮ್ ವೆಂಕಟೇಶ್, ಎಸ್ ಎಲ್ ಎನ್ ವೇಣು, ಪು.ಮಹೇಶ್ ಮತ್ತಿತರಿದ್ದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!