ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚನೆ

ದೊಡ್ಡಬಳ್ಳಾಪುರ: ಕರೊನಾ ವೈರಾಣು ಸೋಂಕು ಪಸರಿಕೆ ಭೀತಿ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ, ಜಿಲ್ಲೆಯಲ್ಲಿ ಜಾರಿಯಲ್ಲಿರುವ ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ,ಚುನಾವಣಾ ಆಯೋಗ ಹಾಗೂ ಕೋವಿಡ್-19 ಮಾರ್ಗಸೂಚಿ ಅನ್ವಯ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಿಸಲು ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ 65ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್-19 ಸಾಂಕ್ರಾಮಿಕ ಬಿಕ್ಕಟ್ಟನಿಂದಾಗಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು, ಮೆರವಣಿಗೆ, ಜಾಥಾ ಕಾರ್ಯಕ್ರಮ ಆಯೋಜಿಸುವಂತಿಲ್ಲಎಂದರಲ್ಲದೆ, ಕೋವಿಡ್-19 ಮುನ್ನೆಚ್ಚರಿಕೆ ಕ್ರಮವಾಗಿ ಕಡ್ಡಾಯವಾಗಿ ಮುಖಗವಸು ಧರಿಸಬೇಕು ಹಾಗೂ ಕಾರ್ಯಕ್ರಮದಲ್ಲಿ ಚಿಕ್ಕ ಮಕ್ಕಳು ಸೇರಿದಂತೆ 60 ವರ್ಷ ಮೇಲ್ಪಟ್ಟ ಹಿರಿಯರು ಭಾಗವಹಿಸುವಂತಿಲ್ಲ ಎಂದು ತಿಳಿಸಿದರು.

ಕಳೆದ ವರ್ಷದಂತೆ ಈ ಬಾರಿಯೂ ಅರ್ಥಪೂರ್ಣವಾಗಿ, ಶಿಸ್ತು, ಸಂಯಮ ಹಾಗೂ ಸರಳವಾಗಿ ಕನ್ನಡ ರಾಜ್ಯೋತ್ಸವ ದಿನಾಚರಣೆಯಯನ್ನು ಆಚರಿಸಬೇಕೆಂದರಲ್ಲದೆ, ನಿಗದಿಯಂತೆ ನವೆಂಬರ್ 01 ರಂದು ಬೆಳಿಗ್ಗೆ 9.00 ಗಂಟೆಗೆ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಕಾರ್ಯಕ್ರಮ ನಡೆಯಲಿರುವ ಕ್ರೀಡಾಂಗಣದ ಸುತ್ತ-ಮುತ್ತ ಸ್ವಚ್ಛಗೊಳಿಸಿ, ವೇದಿಕೆಯನ್ನು ಅಲಂಕರಿಸುವಂತೆ ಪುರಸಭೆ ಅಧಿಕಾರಿಗಳಿಗೆ ತಿಳಿಸಿದರು. ಹಾಗೂ ಧ್ವನಿ ವರ್ಧಕ ವ್ಯವಸ್ಥೆ ಮಾಡಲು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಕಡ್ಡಾಯವಾಗಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ಹಾಗೂ ಜನಸಂದಣಿ ಉಂಟಾಗದಂತೆ ಕ್ರಮವಹಿಸಬೇಕು ಎಂದರಲ್ಲದೆ, ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳು, ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರನ್ನು ಪ್ರವೇಶ ದ್ವಾರದಲ್ಲಿಯೇ ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಿಸಬೇಕು, ಸ್ಯಾನಿಟೈಸರ್ ವ್ಯವಸ್ಥೆ ಮಾಡುವುದು ಕಡ್ಡಾಯವೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ತಿಳಿಸಿದರು.

ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವುದರ ಜೊತೆಗೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಿರುವಂತೆ ವಿವಿಧ ಇಲಾಖೆಗಳ ಜಿಲ್ಲಾ

ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ್, ಉಪವಿಭಾಗಾಧಿಕಾರಿ ಅರುಳ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಎನ್.ಎಸ್.ಮಹೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಆರಾಧ್ಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]