ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಅಕ್ಟೋಬರ್ 18 ರಂದು) 201 ಪುರುಷರು ಹಾಗೂ 87 ಮಹಿಳೆಯರು ಸೇರಿದಂತೆ 288 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಬುಲೆಟಿನ್ ವರದಿ ತಿಳಿಸಿದೆ.
ವರದಿಯನ್ವಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 65 ಪುರುಷರು ಮತ್ತು 19 ಮಹಿಳೆಯರು, ನೆಲಮಂಗಲ ತಾಲ್ಲೂಕಿನಲ್ಲಿ 59 ಪುರುಷರು ಮತ್ತು 38 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 25 ಪುರುಷರು ಮತ್ತು 8 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 45 ಪುರುಷರು ಮತ್ತು 18 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 7 ಪುರುಷರು ಹಾಗೂ 4 ಮಹಿಳೆಯರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

