ತುಮಕೂರು: ಶ್ರೀಮಠದ ಒಡನಾಡಿ ಸೋಮಶೇಖರ್ ಅವರ ಅಂತ್ಯಕ್ರಿಯೆಯಲ್ಲಿ ಶ್ರೀಗಳು ಪಾಲ್ಗೊಂಡಿದ್ದ ಹಿನ್ನೆಲೆಯಲ್ಲಿ, ಸರ್ಕಾರದ ಮಾರ್ಗಸೂಚಿ ಅನ್ವಯ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಸ್ವಯಂ ಕ್ವಾರಂಟೀನ್ಗೆ ಒಳಗಾಗಲು ನಿರ್ಧರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಶ್ರೀಗಳು ಸಾರ್ವಜನಿಕ ಸಮಾರಂಭ ಹಾಗೂ ಪೂಜಾ ಕಾರ್ಯದಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದಾರೆ ಎಂದು ಶ್ರೀ ಸಿದ್ದಗಂಗಾ ಮಠ ಪ್ರಕಟಣೆಯಲ್ಲಿ ತಿಳಿಸಿದೆ.
ಅಲ್ಲದೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಶ್ರೀಗಳು ಕ್ವಾರಂಟೀನ್ನಲ್ಲಿರಲು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಸ್ವಯಂ ಕ್ವಾರಂಟೀನ್ಗೆ ಒಳಗಾಗುತ್ತಿರುವುದರಿಂದ ಭಕ್ತರು ಆತಂಕಕ್ಕೆ ಒಳಗಾಗಬಾರದೆಂದು ಮನವಿ ಮಾಡಲಾಗಿದೆ.

