ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 35 ಜನರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, 113 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದರೆ, ಸೋಂಕಿಗೆ ಒಳಗಾಗಿದ್ದ ಇಬ್ಬರು ಸಾವನಪ್ಪಿದ್ದಾರೆ.
ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ, ಮಂಗಳವಾರದ ಸಂಜೆಯವರಗೆ, ದೊಡ್ಡಬಳ್ಳಾಪುರ ತಾಲೂಕಿನ 17 ಪುರುಷರು ಹಾಗೂ 18 ಮಹಿಳೆಯರು ಸೇರಿ 35 ಜನರಿಗೆ ಸೋಂಕು ದೃಢಪಟ್ಟಿದ್ದರೆ, ಬಾಶೆಟ್ಟಿಹಳ್ಳಿಯ 60 ವರ್ಷದ ಮಹಿಳೆ, ನಗರದ ಸಿನಿಮಾ ರಸ್ತೆಯ 65 ಪುರುಷ ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ ಹರಿತಲೇಖನಿಗೆ ತಿಳಿಸಿದ್ದಾರೆ.
ಪ್ರಸ್ತುತ ತಾಲೂಕಿನಲ್ಲಿ 4015 ಮಂದಿಗೆ ಕರೊನಾ ಸೋಂಕು ತಗುಲಿದ್ದು 3526 ಮಂದಿ ಗುಣಮುಖರಾಗಿದ್ದಾರೆ.
ಉಳಿದಂತೆ ಸೋಂಕಿಗೆ ಒಳಗಾದ 56 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 431 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

