ದೊಡ್ಡಬಳ್ಳಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಬಾಲ ನ್ಯಾಯ (ಮಕ್ಕಳ ಪಾಲನೆ ಹಾಗೂ ರಕ್ಷಣೆ) ಕಾಯ್ದೆ, 2015 ಹಾಗೂ ಬಾಲ ನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಮಾದರಿ ನಿಯಮ 2016ರನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರು ಮತ್ತು 4 ಜನ ಸದಸ್ಯರು ಹಾಗೂ ಬಾಲ ನ್ಯಾಯ ಮಂಡಳಿಗೆ 2 ಸದಸ್ಯರನ್ನು 2020 ರಿಂದ 2023 ರವರೆಗೆ 3 ವರ್ಷಗಳ ಕಾಲಾವಧಿಗೆ ಸದಸ್ಯತ್ವಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಿಡಬ್ಲ್ಯೂಸಿ ಹಾಗೂ ಜೆಜೆಬಿಗಳಿಗೆ ಪ್ರತ್ಯೇಕ ಅರ್ಜಿ ನಮೂನೆಗಳು (ಅರ್ಜಿಯು ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿದೆ), ಸೂಚನೆಗಳು, ಅಫಿಡವಿಟ್‍ಗಳು ನಿರ್ದೇಶನಾಲಯದ ವೆಬ್‍ಸೈಟ್ www.icps.karnataka.gov.in ರಲ್ಲಿ ಲಭ್ಯವಿರುತ್ತದೆ.
ಅರ್ಜಿದಾರರು ಸಿಡಬ್ಲ್ಯೂಸಿ ಅಥವಾ ಜೆ.ಜೆ.ಬಿ ಎರಡರಲ್ಲಿ ಯಾವುದಾದರೂ ಒಂದಕ್ಕೆ ಮಾತ್ರ ಅರ್ಜಿ ಸಲ್ಲಿಸಲು ಬಯಸಿದ್ದಲ್ಲಿ, ಸದರಿ ಅರ್ಜಿಯನ್ನು ಮಾತ್ರ ದ್ವಿಪ್ರತಿಯಲ್ಲಿ ಸಲ್ಲಿಸುವುದು. ಒಂದು ವೇಳೆ ಅರ್ಜಿದಾರರು ಸಿಡಬ್ಲ್ಯೂಸಿ ಹಾಗೂ ಜೆಜೆಬಿ ಎರಡಕ್ಕೂ ಅರ್ಜಿ ಸಲ್ಲಿಸಲು ಬಯಸಿದ್ದಲ್ಲಿ ಭರ್ತಿ ಮಾಡಿದ ಪ್ರತ್ಯೇಕ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ರಿಜಿಸ್ಟರ್ಡ್ ಅಂಚೆ ಮೂಲಕ (ಆರ್.ಪಿ.ಎ.ಡಿ) ಅಥವಾ ಖುದ್ದಾಗಿ ನಿರ್ದೇಶಕರು, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕೇರಾಫ್ ಮಹಿಳಾ ಮತ್ತು ಮಕ್ಕಳ ನಿರ್ದೇಶನಾಲಯ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ಬೀದಿ, ಬೆಂಗಳೂರು-560001 ಇಲ್ಲಿಗೆ ಸಲ್ಲಿಸುವುದು. ಅರ್ಜಿ ಸಲ್ಲಿಸಲು 2020ರ ನವೆಂಬರ್ 15 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿ, ದೂ.ಸಂ.:080-29560034, ನಿರ್ದೇಶನಾಲಯ ದೂ.ಸಂ.: 080-22879382/ 080-22879383 ಹಾಗೂ ಖ.ಸಿ.ಪಿಯು ಕಚೇರಿ/ ಸಿಡಬ್ಲ್ಯೂಸಿ/ಜೆಜೆಬಿ ವಿಳಾಸಕ್ಕಾಗಿwww.icps.karnataka.gov.in ಅನ್ನು ನೋಡಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

