ಅಬುಧಾಬಿ: ಐಪಿಎಲ್-2020ರ ಕೋಲ್ಕತ್ತಾ ನೈಟ್ ರೈಡರ್ಸ್ ಜೊತೆ ನಡೆದ ಪಂದ್ಯದಲ್ಲಿ ಆರ್ ಸಿಬಿ ತಂಡ 8 ವಿಕೇಟ್ ಗಳಿಂದ ಗೆದ್ದು ಬೀಗಿದೆ.
ಟಾಸ್ ಗೆದ್ದು ಬ್ಯಾಟ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಬೆಂಗಳೂರು ತಂಡಕ್ಕೆ 85 ರನ್‍ಗಳ ಸಾಧಾರಣ ಗುರಿ ನೀಡಿತ್ತು.
ಅದ್ಭುತವಾಗಿ ಬೌಲ್ ಮಾಡಿದ ಮೊಹಮ್ಮದ್ ಸಿರಾಜ್ ಎರಡು ಓವರ್ ಬೌಲ್ ಮಾಡಿ ಒಂದು ರನ್ ನೀಡದೇ ಮೇಡಿನ್ ಮಾಡಿ ಮೂರು ವಿಕೆಟ್ ಕಬಳಿಸಿದರು. ಈ ಮೂಲಕ ಐಪಿಎಲ್‍ನ ಒಂದೇ ಪಂದ್ಯದಲ್ಲಿ ಎರಡು ಮೇಡಿನ್ ಓವರ್ ಮಾಡಿದ ಮೊದಲ ಆಟಗಾರ ಎಂಬ ದಾಖಲೆ ಬರೆದರು.
ಐದನೇ ಓವರ್ ಮಾಡಿದ ಕ್ರಿಸ್ ಮೋರಿಸ್ ಮೇಡಿನ್ ಪಡೆದರೆ. ನಂತರ 12ನೇ ಓವರ್ ಅನ್ನು ವಾಷಿಂಗ್ಟನ್ ಸುಂದರ್ ಅವರು ಮೇಡಿನ್ ಮಾಡಿದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ನಾಲ್ಕು ಮೇಡಿನ್ ಓವರ್ ಮಾಡಿದ ತಂಡ ಎಂಬ ಹೆಗ್ಗಳಿಕೆ ಆರ್‌ಸಿಬಿ ಪಾತ್ರವಾಗಿದೆ.
ನಂತರ ಬ್ಯಾಟಿಂಗ್ ಆರಂಭಿಸಿದ ಆರ್ ಸಿಬಿ ಉತ್ತಮ ಆರಂಭ ಪಡೆಯಿತಾದರೂ ಫಿಂಚ್ ಹಾಗೂ ದೇವದತ್ ಪಡಿಕಲ್ ವಿಕೆಟ್ ಕಳೆದುಕೊಂಡರು. ಕೂಲಾಗಿ ಆಡಿದ ಗುರ್ಕಿರತ್ ಹಾಗೂ ಕೊಯ್ಲಿ 39 ಬಾಲ್ ಉಳಿದಿರುವಂತೆ ತಂಡವನ್ನು ಗೆಲುವಿನ ದಡ ಸೇರಿಸಿದರು.
ಈ 8 ವಿಕೆಟ್‌ಗಳ ಗೆಲುವಿನೊಂದಿಗೆ ಆರ್ ಸಿಬಿ ತಂಡ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದೆ.

