ದೊಡ್ಡಬಳ್ಳಾಪುರ: ಟಿಎಪಿಎಂಸಿಎಸ್‌ ಚುನಾವಣೆ ನವೆಂಬರ್ 8ಕ್ಕೆ

ದೊಡ್ಡಬಳ್ಳಾಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಎಂಸಿಎಸ್‌) ಚುನಾವಣೆ ನ.8 ರಂದು ನಡೆಯಲಿದ್ದು,ಚುನಾವಣೆ ನಡೆಯುವ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆ ಎಲ್ಲಾ ಮತದಾರರಿಗು ಅಂಚೆ ಮೂಲಕ ನೋಟಿಸ್‌ ತಲುಪುವುದರೊಂದಿಗೆ ಚುನಾವಣಾ ಕಣ ಸಜ್ಜಾಗುತ್ತಿದೆ.

13 ಸ್ಥಾನಗಳನ್ನು ಹೊಂದಿರುವ ಟಿಎಪಿಎಂಸಿಎಸ್‌ನಲ್ಲಿ ‘ಎ’ತರಗತಿಯಿಂದ 4 (ವಿಎಸ್‌ಎಸ್‌ಎನ್‌ಗಳಿಂದ), ‘ಬಿ’ ತರಗತಿಯಿಂದ 9 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ಒಟ್ಟು ಸದಸ್ಯರ ಸಂಖ್ಯೆ  4,200 ಜನರಿದ್ದಾರೆ. ಇದರಲ್ಲಿ  2,163 ಜನ ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ. 9 ಸ್ಥಾನಗಳ ಪೈಕಿ ಮಹಿಳಾ ಅಭ್ಯರ್ಥಿಗಳಿಗೆ 2 ಸ್ಥಾನ ಮೀಸಲು. ಸಾಮಾನ್ಯ 3, ಬಿಸಿಎಂ ‘ಎ’ 1, ಬಿಸಿಎಂ ‘ಬಿ’ 1, ಎಸ್ಸಿ 1, ಎಸ್ಟಿ ಅಭ್ಯರ್ಥಿಗೆ 1 ಸ್ಥಾನ ಮೀಸಲಾಗಿದೆ. 

ನಾಮ ಪತ್ರಗಳ ಸಲ್ಲಿಕೆ ಅ.29 ರಿಂದ ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ. ನಾಮ ಪತ್ರ ಸಲ್ಲಿಕೆಗೆ ಕೊನೆಯ ದಿನ ಅ.30. ನಾಮ ಪತ್ರಗಳನ್ನು ಹಿಂದಕ್ಕೆ ಪಡೆಯಲು ನ.1 ರಂದು ಮಧ್ಯಾಹ್ನ 3 ಗಂಟೆಯವರೆಗೆ ಅವಕಾಶ ಇದೆ. ನ.2 ರಂದು ಚುನಾವಣ ಕಣದಲ್ಲಿ ಉಳಿದವರ ಅಂತಿಮಪಟ್ಟಿ ಪ್ರಕಟವಾಗಲಿದೆ. ನ.8 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮತದಾನ ನಡೆಯಲಿದೆ. ತಹಶೀಲ್ದಾರ್‌ ಟಿ.ಎಸ್‌.ಶಿವರಾಜ್‌ ಅವರು ಚುನಾವಣ ಅಧಿಕಾರಿಗಳಾಗಿದ್ದಾರೆ.  

1966ರಲ್ಲಿ  ಕ್ಷೇತ್ರದ ಹಿರಿಯ ರಾಜಕಾರಣಿ ಮಾಜಿ ಸಚಿವ ಜಿ.ರಾಮೇಗೌಡ ಅವರಿಂದ ಸ್ಥಾಪನೆಯಾದ ಟಿಎಪಿಎಂಸಿಎಸ್‌ಗೆ ಸಂಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ತಾಲ್ಲೂಕಿನಲ್ಲಿ ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಭದ್ರಬುನಾದಿಯನ್ನು ಹಾಕಿದ್ದಾರೆ.

ಆರ್.ಎಲ್‌.ಜಾಲಪ್ಪ ಅವರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾಗ ಕ್ಷೇತ್ರದಲ್ಲಿನ ಯಾವುದೇ ಸಹಕಾರಿ ಸಂಸ್ಥೆಗಳಲ್ಲೂ ಅವರು ಸೂಚಿಸಿದವರು ಮಾತ್ರ ನಿರ್ದೇಶಕರು, ಅಧ್ಯಕ್ಷರಾಗಿ ಆಡಳಿತ ನಡೆಸುತ್ತಿದ್ದರು, ಟಿಎಪಿಎಂಸಿಎಸ್‌ನಲ್ಲೂ ಸಹ. ಆದರೆ ಕ್ಷೇತ್ರದಲ್ಲಿ ಬದಲಾದ ರಾಜಕೀಯ ಬೆಳವಣಿಗೆಯ ನಂತರ. ಈಗ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಮೂರು ಪಕ್ಷಗಳಲ್ಲೂ ಮುಖಂಡರು, ಕಾರ್ಯಕರ್ತರು ಸಮಬಲವನ್ನು ಹೊಂದಿದ್ದಾರೆ. ಹೀಗಾಗಿ ಸಹಕಾರಿ ಕ್ಷೇತ್ರದಿಂದ ಮೊದಲುಗೊಂಡು ಎಲ್ಲಾ ಕಡೆಯು ಚುನಾವಣೆಗಳು ತೀವ್ರ ಪೈಪೋಟಿಯಿಂದಲೇ ಕೂಡಿವೆ.

ಸಹಕಾರಿ ಕ್ಷೇತ್ರದ ಚುನಾವಣೆಗೆ ರಾಜಕೀಯ ಪಕ್ಷದ ಅಧಿಕೃತ ಚಿಹ್ನೆಯನ್ನು ಬಳಸಿಕೊಳ್ಳಲು ಅವಕಾಶ ಇಲ್ಲ. ಆದರೆ ಪಕ್ಷ ಬೆಂಬಲಿತದ ಆಧಾರದ ಮೇಲೆಯೇ ಸಿಂಡಿಕೆಗಳನ್ನಾಗಿ ಮಾಡಿಕೊಂಡು ಮತಯಾಚನೆ ನಡೆಯುತ್ತದೆ. ಈಗಾಗಲೇ ಮೂರು ರಾಜಕೀಯ ಪಕ್ಷಗಳಿಂದಲು ಆಕಾಂಕ್ಷಿಗಳ ಸಭೆಗಳನ್ನು ನಡೆಸಿ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ. ಅಂತಿಮವಾಗಿ ಪಕ್ಷ ಸೂಚಿಸಿದ ಅಥವಾ ಬಂಡಾಯವಾಗಿಯು ಹಲವಾರು ಜನ ನಾಮ ಪತ್ರಗಳನ್ನು ಸಲ್ಲಿಸುವ ಸಾಧ್ಯತೆ ಈ ಬಾರಿ ಹೆಚ್ಚಾಗಿದೆ.

ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಮೂರು ಪಕ್ಷಗಳಲ್ಲು ಬಣ ರಾಜಕಾರಣ ಪ್ರಭಲವಾಗಿದ್ದು  ಹೈಕಮಾಂಡ್‌ ಹಿಡಿತ ಕೈತಪ್ಪಿ ಹೋಗಿದೆ. ಕಳೆದ ಬಾರಿ ಜೆಡಿಎಸ್‌, ಕಾಂಗ್ರೆಸ್‌ ಬೆಂಬಲಿತ ನಿರ್ದೇಶಕರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದರು. ಆದರೆ ಯಾವ ಪಕ್ಷಕ್ಕು ಸ್ಪಷ್ಟ ಬಹುಮತ ಬರದೇ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿಯೊಂದಿಗೆ ಎರಡೂ ಪಕ್ಷದವರು ಅಧ್ಯಕ್ಷರಾಗಿ ಆಡಳಿತ ನಡೆಸಿದ್ದರು.  

ನ್ಯಾಯಾಲಯದ ಮೊರೆ: ಸಹಕಾರ ಸಂಘಗಳ ನಿಯಮಗಳ ಪ್ರಕಾರ ಐದು ವರ್ಷಗಳ ಆಡಳಿತಾವಧಿಯಲ್ಲಿ ನಡೆಯುವ ಸರ್ವ ಸದಸ್ಯರ ಸಭೆಗಳಲ್ಲಿ ಮೂರು ಸಭೆಗಳಿಗೆ ಸದಸ್ಯರು ಕಡ್ಡಾಯವಾಗಿ ಹಾಜರಾಗಿ, ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಬೇಕು. ಆಗ ಮಾತ್ರ ಸದಸ್ಯರಿಗೆ ಮತದಾನದ ಹಕ್ಕು ಬರುತ್ತದೆ. ಆದರೆ ಬಹುತೇಕ ಜನ ಸದಸ್ಯರು ಸಾಮಾನ್ಯ ಸರ್ವಸದಸ್ಯರ  ಸಭೆಗೆ ಹಾಜರಾಗದ ಕಾರಣ ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ. ಸರ್ವ ಸದಸ್ಯರ ಸಭೆಗೆ ಹಾಜರಾಗಲು ಸಾಧ್ಯವಾಗದೇ ಇರುವ ಬಗ್ಗೆ ಸಕಾರಣವನ್ನು ನೀಡಿ ನ್ಯಾಯಾಲಯದಿಂದ ಮತದಾನ ಮಾಡುವ ಹಕ್ಕನ್ನು ಪಡೆಯಲು ಅವಕಾಶ ಇದೆ. ಹೀಗಾಗಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುವ ಆಕಾಂಕ್ಷಿಗಳು ಮತದಾನದ ಹಕ್ಕು ಇಲ್ಲದ ಸದಸ್ಯರಿಂದ ವಕಾಲತ್ತಿಗೆ ಸಹಿ ಪಡೆದು ನ್ಯಾಯಾಲಯದ ಮೂಲಕ ಮತದಾನದ ಹಕ್ಕು ಪಡೆಯಲು ಮುಂದಾಗಿದ್ದಾರೆ.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]