ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಜಯಮ್ಮ ಲಕ್ಷ್ಮೀನಾರಾಯಣ ಅವರ ವಿರುದ್ಧ ಅವಿಶ್ವಾಸ ಸೂಚನೆಯ ಕುರಿತ ಸಭೆಯು ಅಕ್ಟೋಬರ್ 27 ರಂದು ನಡೆಯಲಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ನವೀನ್ ರಾಜ್ ಸಿಂಗ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಜಯಮ್ಮ ಲಕ್ಷ್ಮೀನಾರಾಯಣ ಅವರ ವಿರುದ್ಧ ಅವಿಶ್ವಾಸ ಸೂಚನೆಯ ಸಭೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 27 ರಂದು ಬೆಳಿಗ್ಗೆ 10:00 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದಕ್ಕು ಮುನ್ನ ಅಕ್ಟೋಬರ್ 14ರಂದು ಅವಿಶ್ವಾಸ ಸೂಚನೆಯ ಸಭೆ ನಿಗದಿಯಾಗಿತ್ತು, ಆ ವೇಳೆ ಆರೋಪ ಪ್ರತ್ಯಾರೋಪ ನಡೆದಿತ್ತು. ಅಲ್ಲದೆ ಅಧ್ಯಕ್ಷೆ ನ್ಯಾಯಾಲಯದ ಮೆಟ್ಟಿಲೇರಿದ್ದ ಕಾರಣ ಸಭೆಯನ್ನು ರದ್ದು ಮಾಡಿ ಮತ್ತೆ ಎರಡನೇ ಬಾರಿಗೆ ಸಭೆ ಕರೆಯಲಾಗಿದೆ.

