ದೊಡ್ಡಬಳ್ಳಾಪುರ: ಕರೊನಾ ಸೋಂಕಿನ ಹಾವಳಿಯಿಂದಾಗಿ ದಕ್ಷಿಣ ಭಾರತದ ಪ್ರಖ್ಯಾತ ಘಾಟಿ ಸುಬ್ರಹ್ಮಣ್ಯ ದೇವಾಲಯವನ್ನು ಸೀಲ್ ಡೌನ್ ಮಾಡಲಾಗಿದೆ.
ದೇವಾಲಯದ ಸಿಬ್ಬಂದಿಯೋರ್ವರಿಗೆ ಕರೊನಾ ಸೋಂಕು ದೃಢ ಪಟ್ಟ ಕಾರಣ, ಮಂಜಾಗ್ರತಾ ಕ್ರಮವಾಗಿ ದೇವಾಲಯದವನ್ನು ಸ್ಯಾನಿಟೈಸರ್ ಮಾಡಿಸಿ 48 ಗಂಟೆಗಳ ಕಾಲ ಸೀಲ್ ಡೌನ್ ಮಾಡಲಾಗಿದ್ದು, ಶುಕ್ರವಾರದಿಂದ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ದೇವಾಲಯದ ಕಾರ್ಯಾನಿರ್ವಹಣಾಧಿಕಾರಿ ಕೃಷ್ಣಪ್ಪ ಹರಿತಲೇಖನಿಗೆ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 99 ಮಂದಿಗೆ ಸೋಂಕು ದೃಢ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 99 ಜನರಿಗೆ ಕರೊನಾ ಸೋಂಕು ದೃಢಪಟ್ಟಿದೆ.
ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ, ಬುಧವಾರದ ಸಂಜೆಯವರಗೆ, ದೊಡ್ಡಬಳ್ಳಾಪುರ ತಾಲೂಕಿನ 62 ಪುರುಷರು ಹಾಗೂ 37 ಮಹಿಳೆಯರು ಸೇರಿ 99 ಜನರಿಗೆ ಸೋಂಕು ದೃಢಪಟ್ಟಿದೆ.
ಪ್ರಸ್ತುತ ತಾಲೂಕಿನಲ್ಲಿ 4114 ಮಂದಿಗೆ ಕರೊನಾ ಸೋಂಕು ತಗುಲಿದ್ದು 3526 ಮಂದಿ ಗುಣಮುಖರಾಗಿದ್ದಾರೆ.
ಉಳಿದಂತೆ ಸೋಂಕಿಗೆ ಒಳಗಾದ 56 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 532 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

